ಚನ್ನಪಟ್ಟಣ: ತಾಲೂಕಿನ ಚಕ್ಕೆರೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು
ಚನ್ನಪಟ್ಟಣ: ತಾಲೂಕಿನ ಚಕ್ಕೆರೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ, ವಿದ್ಯಾರ್ಥಿಗಳು ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳತೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಪ್ರಾಮಾಣಿಕತೆ, ಶಿಸ್ತು ಮತ್ತು ದೇಶಪ್ರೇಮವನ್ನು ತಮ್ಮ ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು ಎಂದು ಹೇಳಿದರು.ಶಿಕ್ಷಕ ಮಧುಸೂದನ್ ಮಾತನಾಡಿ, ಗಾಂಧೀಜಿಯವರ ಸರಳ ಜೀವನ ಮತ್ತು ಸತ್ಯದ ಮಾರ್ಗವು ಎಲ್ಲರಿಗೂ ಮಾದರಿಯಾಗಿದೆ. ವಿದ್ಯಾರ್ಥಿಗಳು ಸತ್ಯ, ಶಿಸ್ತು ಹಾಗೂ ಉತ್ತಮ ನಡವಳಿಕೆಗೆ ಆದ್ಯತೆ ನೀಡಬೇಕು. ಓದಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಶಿಕ್ಷಕಿ ಬಿ.ಕೆ.ಲತಾ ಮಾತನಾಡಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಸರಳತೆ ಮತ್ತು ಪ್ರಾಮಾಣಿಕತೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ದೇಶ ಮತ್ತು ಸಮಾಜದ ಬಗ್ಗೆ ಕಾಳಜಿ ಹೊಂದುವ ಗುಣವನ್ನು ಬೆಳೆಸಿಕೊಳ್ಳಬೇಕು. ಹಿರಿಯರನ್ನು ಗೌರವಿಸಿ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಜೀವನ, ದೇಶಸೇವೆ, ಸರಳತೆ, ಸತ್ಯ, ಅಹಿಂಸೆ ಹಾಗೂ ದೇಶಪ್ರೇಮದ ಕುರಿತು ಮಾತನಾಡಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು.ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಜಣ್ಣ, ಶಶಿರೇಖಾ, ರಶ್ಮಿ, ಶಶಿಕುಮಾರ್, ರಾಜಮ್ಮ, ಸಾಕಮ್ಮ, ಪಲ್ಲವಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೊಟೋ೨ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಚಕ್ಕೆರೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿಯನ್ನು ಆಚರಿಸಲಾಯಿತು.