ಸಾರಾಂಶ
ಕುಂದಗೋಳ ಪಟ್ಟಣದ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಹಾಗೂ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ನಡೆಯಿತು.
- ಮಂತ್ರಾಕ್ಷತೆಯ ಮೆರವಣಿಗೆಯಲ್ಲಿ ಕಲ್ಯಾಣಪುರದ ಬಸವಣ್ಣಜ್ಜನವರು
ಕನ್ನಡಪ್ರಭ ವಾರ್ತೆ ಕುಂದಗೋಳ
ಮಂದಿರ ನಿರ್ಮಾಣಕ್ಕಾಗಿ ಅನೇಕ ವರ್ಷಗಳಿಂದ ಭಕ್ತರು ಕಾಯುತ್ತಿದ್ದು ಈದೀಗ ಅವರ ಮನದಾಸೆಯಂತೆ ರಾಮಜನ್ಮ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಪಟ್ಟಣದ ಕಲ್ಯಾಣಪುರದ ಬಸವಣ್ಣಜ್ಜನವರು ಹೇಳಿದರು.ಪಟ್ಟಣದ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಹಾಗೂ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಆರ್.ಎಸ್.ಎಸ್. ಉತ್ತರ ಪ್ರಾಂಥ ಕಾರ್ಯಕಾರಿಣಿ ಸದಸ್ಯ ಶ್ರೀಧರ ನಾಡಗೇರ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಅವಿಸ್ಮರಣೀಯವಾಗಿದ್ದು, ಇದು ಸರ್ವಧರ್ಮದವರ ಗೆಲುವಾಗಿದೆ ಎಂದರು.ಮಂಗಳವಾರ ಬೆಳಗ್ಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಬಂದ ಮಂತ್ರಾಕ್ಷತೆಯ ಮೆರವಣಿಗೆಯು ಪಟ್ಟಣದ ಶಿವಾಜಿ ನಗರ ಕಿಲ್ಲಾ ಓಣಿಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಶಾಸಕ ಎಂ.ಆರ್. ಪಾಟೀಲ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಹಿರೇಮಠದ ಶಿತಿಕಂಠೇಶ್ವರ ಶ್ರೀಗಳು, ಕಲ್ಯಾಣಪುರದ ಬಸವಣ್ಣಜ್ಜನವರು, ಶಿವಾನಂದ ಮಠದ ಮಹಾಂತ ಶ್ರೀಗಳು ಸಾನಿಧ್ಯ ವಹಿಸಿದ್ದರು.