ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಶ್ಲಾಘನೀಯ: ಗೀತಾ

| Published : May 29 2024, 12:51 AM IST

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಶ್ಲಾಘನೀಯ: ಗೀತಾ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವಂತಹ ಕಾಲಘಟ್ಟವಿದು. ಹೀಗಿದ್ದರೂ ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸಬೇಕು ಎಂಬ ದೃಢ ಇಚ್ಛಾಶಕ್ತಿಯಿಂದ ಹಳೇಯ ವಿದ್ಯಾರ್ಥಿಗಳು ಶ್ರಮವಹಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಿದ್ದಾರೆ. ಅವರ ಕಾಳಜಿ ಶ್ಲಾಘನೀಯ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ ಹೇಳಿದ್ದಾರೆ.

ಕನ್ನಡಪ್ರಭವಾರ್ತೆ, ಚನ್ನಗಿರಿ

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವಂತಹ ಕಾಲಘಟ್ಟವಿದು. ಹೀಗಿದ್ದರೂ ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸಬೇಕು ಎಂಬ ದೃಢ ಇಚ್ಛಾಶಕ್ತಿಯಿಂದ ಹಳೇಯ ವಿದ್ಯಾರ್ಥಿಗಳು ಶ್ರಮವಹಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಿದ್ದಾರೆ. ಅವರ ಕಾಳಜಿ ಶ್ಲಾಘನೀಯ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ ಹೇಳಿದರು.

ಸೋಮವಾರ ಸಂಜೆ ತಾಲೂಕಿನ ದೋಣಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಬೇಕಾದರೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕವಾದ ಬೆಳವಣಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯಕವಾಗಿದೆ ಎಂದರು.

ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದವರಿಗೆ ಗ್ರಾಮದ ಕ್ರೀಡಾ ಸಾಧಕರಿಗೆ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ತಾಲೂಕು ಮುಖ್ಯ ಶಿಕ್ಷಕರ ಸಂಘ ಅಧ್ಯಕ್ಷ ಪಿ.ವಿ.ಸ್ವಾಮಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ. ಎಸ್.ಶಂಕರಪ್ಪ, ತಾಪಂ ಕಾರ್ಯನಿರ್ವಾಧಿಕಾರಿ ಬಿ.ಕೆ.ಉತ್ತಮ, ನಾಗರಾಜ್, ಸುರೇಶ್, ಶಶೀಧರ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.

- - - -28ಕೆಸಿಎನ್‌ಜಿ3:

ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉಪ ನಿರ್ದೇಶಕಿ ಗೀತಾ ಉದ್ಘಾಟಿಸಿದರು.