ನಗರದ ಕೆಇಬಿ ಆವರಣದಲ್ಲಿ ವಿದ್ಯುತ್ ಸಮಸ್ಯೆ ಬಗೆ ಹರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ 5ನೇ ದಿನ ಪೂರೈಸಿದೆ. 5ನೇ ದಿನದ ಧರಣಿಗೆ ವಿಜಯಪುರ ನಗರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ ಬೆಂಬಲ ವ್ಯಕ್ತಪಡಿಸಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಸೈಯ್ಯದ್ ಅಜೀಂಪೀರ್ ಖಾದ್ರಿಯವರಿಗೆ ಫೋನ್ ಮಾಡುವ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕ ಪಡೆಯಲು ಆಗುತ್ತಿರುವ ತೊಂದರೆಯನ್ನು ಕೂಡಲೇ ನಿವಾರಿಸುವಂತೆ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕೆಇಬಿ ಆವರಣದಲ್ಲಿ ವಿದ್ಯುತ್ ಸಮಸ್ಯೆ ಬಗೆ ಹರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ 5ನೇ ದಿನ ಪೂರೈಸಿದೆ. 5ನೇ ದಿನದ ಧರಣಿಗೆ ವಿಜಯಪುರ ನಗರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ ಬೆಂಬಲ ವ್ಯಕ್ತಪಡಿಸಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಸೈಯ್ಯದ್ ಅಜೀಂಪೀರ್ ಖಾದ್ರಿಯವರಿಗೆ ಫೋನ್ ಮಾಡುವ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕ ಪಡೆಯಲು ಆಗುತ್ತಿರುವ ತೊಂದರೆಯನ್ನು ಕೂಡಲೇ ನಿವಾರಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಕಳೆದ 5 ದಿನಗಳಿಂದ ವಿದ್ಯುತ್ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು ಕೂಡ, ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಪ್ರಯತ್ನಿಸದೇ ಇರುವುದು ಅಧಿಕಾರಿಗಳ ಬೇಜವಾಬ್ದಾರಿ ನಡೆ ಸರ್ಕಾರದ ಜನ ವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ. ಒಂದು ವೇಳೆ ಸಮಸ್ಯೆ ಬಗೆ ಹರಿಸದಿದ್ದರೇ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ವಾಲ್ಮೀಕಿ ಸಮಾಜದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ವಿಜಯಪುರ ಜಿಲ್ಲೆಯ ಜನರಿಗೆ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯದ ಹಿಂದಿರುವ ಕಾಣದ ಕೈ ಯಾವುದು ಯಾವುದು ಎಂದು ಜಿಲ್ಲೆಯ ಜನರಿಗೆ ಗೊತ್ತಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಜನವಿರೋಧಿ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ಜಿಲ್ಲಾಧ್ಯಕ್ಷ ವಿನೋದ ಖೇಡ, ಲಿಂಗರಾಜ ಬಿದರಕುಂದಿ, ಅನೀಲ ಇಕ್ಕಡೆ, ಲಾಯಪ್ಪ ಇಂಗಳೆ, ಕೆ.ಎಂ.ಹುAಡೇಕಾರ, ರಫೀಕ ಬಾಗವಾನ, ಚಾಂದಸಾಬ ಗೊಳಸಂಗಿ, ಪ್ರಶಾಂತ ಪಾಟೀಲ, ಜುಬೇರ ಮುಂಡೇವಾಡಿ, ಮೈನುದ್ದೀನ ಮುಂಡೆವಾಡಿ, ಮುಜಾಯಿದ್ ಸೈಯ್ಯದ್, ಅಮೂಲ ಪವಾರ, ಪರಶುರಾಮ ಗಾಯಕವಾಡ, ಇಬ್ರಾಹಿಂ ಸೂಳಿಬಾಯಿ, ಡಿ.ಜಿ.ಶಿಂಧೆ, ಸಂಜಯ ಕುಮಾರ, ಸುಂದರ ಚವ್ಹಾಣ, ಸಂತೋಷ ನಾಯಕ, ಅಂಬಣ್ಣ ಗುನ್ನಾಪೂರ, ಶಂಕ್ರಮ್ಮ ಕೋರಿ, ಅನೀಲ ಪವಾರ, ಅಶೋಕ ವಾಲಿಕಾರ, ಎಸ್.ಎಸ್.ದೊಡಮನಿ, ನೀಲಾಂಬಿಕಾ ಬಿರಾದಾರ, ಡಿ.ಕೆ.ಹುಂಡೇಕಾರ, ಸೇವು ಚವ್ಹಾಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಕಳೆದ 5 ದಿನಗಳಿಂದ ವಿದ್ಯುತ್ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು ಕೂಡ, ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಪ್ರಯತ್ನಿಸದೇ ಇರುವುದು ಅಧಿಕಾರಿಗಳ ಬೇಜವಾಬ್ದಾರಿ ನಡೆ ಸರ್ಕಾರದ ಜನ ವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ. ಒಂದು ವೇಳೆ ಸಮಸ್ಯೆ ಬಗೆ ಹರಿಸದಿದ್ದರೇ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ.
-ಮಲ್ಲಿಕಾರ್ಜುನ ಕೆಂಗನಾಳ, ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷರು.