ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು : ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ

| Published : Dec 27 2024, 12:49 AM IST / Updated: Dec 27 2024, 11:59 AM IST

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು : ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಹಾವೇರಿ ತಾಲೂಕಿನ ನೂತನ ಅಧ್ಯಕ್ಷರಾಗಿ ರವೀಂದ್ರಕುಮಾರ ಅಂಗಡಿ ಹಾಗೂ ಸವಣೂರ ತಾಲೂಕಿನ ಯುವ ಘಟಕದ ಅಧ್ಯಕ್ಷರಾಗಿ ಎಸ್. ರಾಮಚಂದ್ರರಾವ್ ಅವರನ್ನು ನೇಮಕ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಆದೇಶ ಪ್ರತಿ ನೀಡಿದರು.

ಹಾವೇರಿ: ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಹಾವೇರಿ ತಾಲೂಕಿನ ನೂತನ ಅಧ್ಯಕ್ಷರಾಗಿ ರವೀಂದ್ರಕುಮಾರ ಅಂಗಡಿ ಹಾಗೂ ಸವಣೂರ ತಾಲೂಕಿನ ಯುವ ಘಟಕದ ಅಧ್ಯಕ್ಷರಾಗಿ ಎಸ್. ರಾಮಚಂದ್ರರಾವ್ ಅವರನ್ನು ನೇಮಕ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಆದೇಶ ಪ್ರತಿ ನೀಡಿದರು.

ಈ ವೇಳೆ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ಹಾವೇರಿ ಹಾಗೂ ಸವಣೂರ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ. ಬೂತ್‌ಮಟ್ಟದಿಂದ ಪಕ್ಷ ಸಂಘಟಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ನೀಡುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡಬೇಕು ಎಂದರು.

ರಾಜ್ಯ ಮಾಧ್ಯಮ ವಕ್ತಾರ ಮಹೇಶಗೌಡ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು. ಮುಂದಿನ ದಿನಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಮಾಡಿ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಿನಿಂದಲೇ ಶ್ರಮವಹಿಸಬೇಕು. ಹಾವೇರಿ ಜಿಲ್ಲೆಯಲ್ಲಿ ಬೃಹತ್ ಕಂಪನಿಯನ್ನು ಸ್ಥಾಪಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹತ್ತಿರ ನಿಯೋಗ ತೆಗೆದುಕೊಂಡು ಹೋಗುತ್ತೇವೆ ಎಂದರು. 

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಸಿದ್ದಬಸಪ್ಪ ಯಾದವ್, ಆಮಿರ್‌ಜಾನ್ ಬೆಫಾರಿ, ಮುಕಪ್ಪ ಪಡೆಪ್ಪನವರ, ಕಾಡದೇವರಮಠ, ಈರಣ್ಣ ನವಲಗುಂದ, ರಾಮನಗೌಡ ಪಾಟೀಲ, ರಮೇಶ ಮಕನೂರ, ವಿಠ್ಠಲ್ ಸುಣಗಾರ, ಚನ್ನವೀರಪ್ಪ ಬಡಿಗೇರ, ಸಲೀಂ ಹಾನಗಲ್ಲ, ಶಂಕ್ರಗೌಡ ಮನಕಟ್ಟು, ಸಿದ್ದು ಪಟ್ಟಣಶೆಟ್ಟಿ, ವೀರಭದ್ರಯ್ಯ ಹಿರೇಮಠ, ಅಬ್ದುಲ್‌ಖಾದರಸಾಬ್ ಕುದರಿಹಾಳ, ರಜಾಕ್ ಕೊಕ್ಕರಗುಂದಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.