ಸಾರಾಂಶ
ಗಡಿಭಾಗ ಸಂಕೇಶ್ವರ ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ವೀರರಾಣಿ ಕಿತ್ತೂರು ಚನ್ನಮ್ಮ ವೇದಿಕೆ, ಗಾಂಧಿ ವೃತ್ತದಲ್ಲಿ ಕನ್ನಡ ಕನ್ನಡ ಧ್ವಜಾರೋಹಣ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಸಂಕೇಶ್ವರ
ಗಡಿಭಾಗ ಸಂಕೇಶ್ವರ ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ವೀರರಾಣಿ ಕಿತ್ತೂರು ಚನ್ನಮ್ಮ ವೇದಿಕೆ, ಗಾಂಧಿ ವೃತ್ತದಲ್ಲಿ ಕನ್ನಡ ಕನ್ನಡ ಧ್ವಜಾರೋಹಣ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.ಪಟ್ಟಣದ ಪ್ರಮುಖ ರಸ್ತೆಗಳಿಂದ ಸಂಚರಿಸಿದ ಮೆರವಣಿಗೆಯಲ್ಲಿ ಶಾಲಾ ಮಕ್ಕಳಿಂದ ವಿವಿಧ ಕೆಲ ಸಾಂಸ್ಕೃತಿಕ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ಭವ್ಯ ಮೆರವಣಿಗೆ ಜನರ ಗಮನ ಸೆಳೆದವು.
ಶಾಸಕ ನಿಖಿಲ ಕತ್ತಿ, ಪುರಸಭೆ ಮಾಜಿ ಅಧ್ಯಕ್ಷ ಅಪ್ಪಾಸಾಹೇಬ ಶಿರಕೋಳಿ, ಗಜಾನನ ಕ್ವಳ್ಳಿ, ಅಮರ ನಲವಡೆ, ಶ್ರೀಕಾಂತ ಹತನೂರಿ, ಸದಸ್ಯರಾದ ಸುನೀಲ ಪರ್ವತರಾವ, ಶಿವಾನಂದ ಮುಡಸಿ, ಪ್ರಮೋದ ಹೊಸಮನಿ, ವಿನೋದ ನಾಯಿಕ, ಪ್ರವೀಣ ನೇಸರಿ, ದಿಲೀಪ ಹೊಸಮನಿ, ಮುಖಂಡರಾದ ಬಸನಗೌಡ ಪಾಟೀಲ, ರೋಹನ ನೇಸರಿ, ಸಚಿನ ಹೆಗಡೆ, ಆನಂದ ಸಂಸುದ್ದಿ, ಸಂತೋಷ ಮುಡಸಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಮಹೇಶ ಹಟ್ಟಿಹೊಳಿ, ಉಪಾಧ್ಯಕ್ಷ ಅಬ್ಬುಬಕರ್ ಶೇಖ, ಪ್ರದಾನ ಕಾರ್ಯದರ್ಶಿ ಸಂತೋಷ ಪಾಟೀಲ, ಕಾರ್ಯದರ್ಶಿ ಸಂತೋಷ ಆಲತಗಿ, ಸಹ ಕಾರ್ಯದರ್ಶಿ ಗುರುರಾಜ ಹುಕ್ಕೇರಿ, ಖಜಾಂಚಿ ಬೀರು ಕರಿಗಾರ ಇತರರಿದ್ದರು.