ಸಾರಾಂಶ
ಗೋಕಾಕ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಕಾಲುವೆ ಪಕ್ಕ ಸುಟ್ಟುಹಾಕಿದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ಗುರುವಾರ ಜರುಗಿದೆ.
ಗೋಕಾಕ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಕಾಲುವೆ ಪಕ್ಕ ಸುಟ್ಟುಹಾಕಿದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ಗುರುವಾರ ಜರುಗಿದೆ.
ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆ ಬರುವುದನ್ನು ಗಮಿನಿಸಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೋಡಿದಾಗ ಅರೆಬೆಂದ ಮಹಿಳೆಯ ಶವ ಕಂಡುಬಂದಿದೆ. ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲಿಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.ಮಹಿಳೆಯನ್ನು ಬೇರೆಡೆ ಕೊಲೆ ಮಾಡಿ ನಂತರ ಸಾಕ್ಷ್ಯ ನಾಶಪಡಿಸುವ ಪ್ರಯತ್ನದಲ್ಲಿ ಸುಟ್ಟು ಹಾಕಲಾಗಿದೆ ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ಹತ್ಯೆಯಾದ ಮಹಿಳೆ ಮಾಲದಿನ್ನಿ ಗ್ರಾಮದ ನಿವಾಸಿ ರಾಜೇಶ್ವರಿ ಆನಂದ ಗಂಗಾಯಿ (27) ಎಂದು ಪೋಷಕರು ಗುರುತಿಸಿದ್ದು, ಪೋಲಿಸ್ ಇಲಾಖೆಯ ಅಧಿಕೃತ ಘೋಷಣೆ ಬಾಕಿ ಇದೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೋಲಿಸರು ಜಾಲ ಬೀಸಿದ್ದಾರೆ.