ಸಾರಾಂಶ
-ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ವೈದ್ಯಕೀಯ ವಿದ್ಯಾರ್ಥಿನಿಗೆ ಮೇಣದ ಬತ್ತಿ ಸಂತಾಪ
ಕನ್ನಡಪ್ರಭ ವಾರ್ತೆ ದಾಬಸ್ಪೇಟೆಕೋಲ್ಕತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಮಾನವ ಜಗತ್ತು ತಲೆ ತಗ್ಗಿಸುವಂತಹ ಘಟನೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್ ಬೇಸರ ವ್ಯಕ್ತಪಡಿಸಿದರು.
ಕೋಲ್ಕತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ನೀಡಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿ ಭಾವಚಿತ್ರಕ್ಕೆ ಮೇಣದ ಬತ್ತಿ ಸಂತಾಪ ಸೂಚಿಸಿ ಮಾತನಾಡಿದ ಅವರು, ಈ ಘಟನೆ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಎಲ್ಲರ ಆತ್ಮಸ್ಥೈರ್ಯವನ್ನು ಕುಂದುವಂತೆ ಮಾಡಿದೆ ಎಂದರು.ವೈದ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ವೈದ್ಯರಿಗೆ ರಕ್ಷಣೆ ಸಿಗುತ್ತಿಲ್ಲ, ಕನಿಷ್ಠ ಗೌರವ ಸಿಗುತ್ತಿಲ್ಲ, ಅತ್ಯಾಚಾರ ಪ್ರಕರಣದಲ್ಲಿ ಪುರಾವೆಗಳನ್ನು ನಾಶಪಡಿಸಲಾಗಿದೆ, ಜೀವವನ್ನು ಉಳಿಸುವ ಕೆಲಸ ಮಾಡುವ ವೈದ್ಯರಿಗೆ ಜೀವ, ಮಾನವನ್ನೇ ಕಳೆಯುವ ಕೆಲಸ ಮಾಡಲಾಗುತ್ತಿದೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಆಸ್ಪತ್ರೆಯ ಸಿಬ್ಬಂದಿ ವರ್ಗದವರಾದ ರಮ್ಯಾ, ಮೂರ್ತಿ, ಮುನೇಶ್ವರ ಇತರರಿದ್ದರು.
ವೈದ್ಯರು, ಆರೋಗ್ಯ ವೃತ್ತಿಪರರ ರಕ್ಷಣೆಗೆ ಭಾರತೀಯ ವೈದ್ಯಕೀಯ ಸಂಘದ ರಾಮನಗರ ಶಾಖೆ ಒತ್ತಾಯಕನ್ನಡಪ್ರಭ ವಾರ್ತೆ ರಾಮನಗರಕೋಲ್ಕತ್ತಾದ ಘಟನೆಯನ್ನು ಖಂಡಿಸಿ ಹಾಗೂ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ರಾಮನಗರ-ಚನ್ನಪಟ್ಟಣ ಶಾಖೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಾಗಿ ವಿಶೇಷ ಹಾಗೂ ಕೇಂದ್ರೀಕೃತ ಕಾನೂನು ಜಾರಿಗೆ ಒತ್ತಾಯಿಸಿದ್ದಾರೆ.ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆ ಡಾ.ಮೌಮಿತಾ ದೇಬನಾಥ್‌ರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯನ್ನು ನಾಗರೀಕರ ಸಮಾಜ ಖಂಡಿಸಿದೆ. ಮಹಿಳಾ ಸಿಬ್ಬಂದಿ ಮೇಲೆ ಇತ್ತೀಚೆಗೆ ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿದೆ ಎಂದು ಐಎಂಎ ರಾಮನಗರ-ಚನ್ನಪಟ್ಟಣ ಶಾಖೆಯ ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು ಲೈಂಗಿಕ ಹಿಂಸೆ ಮತ್ತು ಕೊಲೆಗಳಿಂದ ರಕ್ಷಿಸಲು ತಕ್ಷಣ ಸರ್ಕಾರಗಳು ಮಧ್ಯ ಪ್ರವೇಶಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.ಸಮಗ್ರ ಭದ್ರತಾ ಕ್ರಮಗಳು:ಮಹಿಳೆಯರು ಮತ್ತು ಎ ಉದ್ಯೋಗಿಗಳ ಭದ್ರತೆಯನ್ನು ಖಚಿತಪಡಿಸಲು ಎ ಕೆಲಸದ ಸ್ಥಳಗಳಲ್ಲಿ, ವಿಶೇಷವಾಗಿ ಆರೋಗ್ಯ ಸೇವಾ ಸ್ಥಳಗಳಲ್ಲಿ, ಸಮಗ್ರ ಭದ್ರತಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.ವಿಶೇಷ ಕೇಂದ್ರೀಕೃತ ಕಾನೂನು:ವೈದ್ಯರು ಮತ್ತು ಆರೋಗ್ಯ ವೃತ್ತಿಪರರನ್ನು ಹಿಂಸೆಯಿಂದ ರಕ್ಷಿಸಲು ಮೀಸಲಾದ ವಿಶೇಷ ಕೇಂದ್ರೀಕೃತ ಕಾನೂನನ್ನು ಜಾರಿಗೆ ತರಲು ನಾವು ಒತ್ತಾಯಿಸುತ್ತೇವೆ. ಈ ಕಾನೂನಿನಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಒಳಗೊಂಡಿರಬೇಕು ಮತ್ತು ವೈದ್ಯಕೀಯ ಸಿಬ್ಬಂದಿಯ ಭದ್ರತೆಯನ್ನು ಖಚಿತಪಡಿಸಲು ಕಾನೂನು ಮೂಲಕ ಸ್ವರೂಪವನ್ನು ಒದಗಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ. ಹೆಚ್ಚಿನ ಭದ್ರತಾ ಕ್ರಮಗಳು:ಆಸ್ಪತ್ರೆ ಮತ್ತು ಕ್ಲಿನಿಕ್ಗಳಲ್ಲಿ ಕಡ್ಡಾಯ ಭದ್ರತಾ ಪ್ರೋಟೋಕಾಲ್ ಗಳನ್ನು ಸ್ಥಾಪಿಸಿ, ತರಬೇತಿದಾರರಾದ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವುದು, ಸಿಸಿ ಟಿವಿ ಕ್ಯಾಮೆರಾಗಳನ್ನು ಸ್ಥಾಪಿಸುವುದು, ಮತ್ತು ತಡ ರಾತ್ರಿ ಸಮಯದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸುರಕ್ಷಿತ ಸೌಲಭ್ಯಗಳನ್ನು ಒದಗಿಸಬೇಕು.ಜಾಗೃತಿ ಅಭಿಯಾನಗಳು:ಆರೋಗ್ಯ ಕಾರ್ಯಕರ್ತರ ಗೌರವ ಮತ್ತು ರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರ ಮೇಲೆ ಹಿಂಸೆ ಮಾಡುವುದು ಎಂತಹಾ ಗಂಭೀರ ಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬುದರ ಕುರಿತು ರಾಷ್ಟ್ರಮಟ್ಟದ ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ.ಬೆಂಬಲ ಮತ್ತು ಸಮಾಲೋಚನಾ ಸೇವೆಗಳು:ಕಾರ್ಯ ಸ್ಥಳದ ಹಿಂಸೆಗೆ ಒಳಗಾಗುವವರಿಗೆ ಸಮಾಲೋಚನಾ ಸೇವೆಗಳು, ಕಾನೂನು ಸಹಾಯ, ಮತ್ತು ಪುನರ್ವಸತಿ ಕಾರ್ಯಕ್ರಮಗಳು ಸೇರಿದಂತೆ ಭದ್ರಬೆಂಬಲ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಬೇಕು. ವೈದ್ಯಕೀಯ ಸಮುದಾಯವು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ, ಆದರೆ ನಮ್ಮ ವೃತ್ತಿಪರರ ಭದ್ರತೆ ಮತ್ತು ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಈ ತುರ್ತು ವಿಚಾರಗಳನ್ನು ಪರಿಹರಿಸಲು ಮತ್ತು ಎ ಉದ್ಯೋಗಿಗಳಿಗೆ ಸುರಕ್ಷಿತ ಕೆಲಸದ ಪರಿಸರವನ್ನು ಖಚಿತಪಡಿಸಲು ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತ ಮುಂದಾಗಬೇಕು ಎಂದು ಐ.ಎಂ.ಎ ರಾಮನಗರ-ಚನ್ನಪಟ್ಟಣ ಶಾಖೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.