ಸಾರಾಂಶ
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು.  ಹುಬ್ಬಳಿ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ದಾವಣಗೆರೆಯಲ್ಲಿ ಪ್ರಶ್ನಿಸಿದ್ದಾರೆ.
ದಾವಣಗೆರೆ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಆಗ್ರಹಿಸಿದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹುಬ್ಬಳಿ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂದು ಪ್ರಶ್ನಿಸಿದರು.ಮತ ಬ್ಯಾಂಕ್ ಮತ ಬ್ಯಾಂಕ್ ಎಂದು ಮುಸ್ಲಿಮರನ್ನು ಓಲೈಸಿಕೊಂಡು ಕಾಂಗ್ರೆಸ್ ಅಧಿಕಾರ ನಡೆಸುತ್ತದೆ. ಹಿಂದುಗಳ ರಕ್ಷಣೆ ವಿಚಾರ ಬಂದಾಗ ಮೌನವಹಿಸುತ್ತದೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆ, ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ, ಚಿತ್ರದುರ್ಗದಲ್ಲೂ ಅನ್ಯಕೋಮಿನವರಿಂದ ಹಿಂದೂ ಯುವಕನ ಮೇಲೆ ಹಲ್ಲೆ. ಇದನ್ನೆಲ್ಲ ನೋಡುತ್ತಿದ್ದರೆ ಕಾಂಗ್ರೆಸ್ ಪಕ್ಷದ ಕರಿನೆರಳಿನಲ್ಲಿ ಜಿಹಾದಿಗಳು ಆಕ್ಟಿವ್ ಆಗಿದ್ದಾರೆ ಎನ್ನಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದರು.
ಯುವತಿಯ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ಅವರೇ ಹೇಳುತ್ತಿದ್ದಾರೆ, ಇದೊಂದು ಲವ್ ಜಿಹಾದ್ ಎಂದು. ಅದೇ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಉಡಾಫೆ ಉತ್ತರ ಕೊಡುತ್ತಿದ್ದಾರೆ. ಇಂತಹ ರಾಜ್ಯ ಸರ್ಕಾರವನ್ನು ಜನ ಆದಷ್ಟು ಬೇಗ ಕಿತ್ತು ಹಾಕಬೇಕು ಎಂದು ತಿಳಿಸಿದರು.- - - (-ಫೋಟೋ: ಗಾಯತ್ರಿ ಸಿದ್ದೇಶ್ವರ)
;Resize=(128,128))
;Resize=(128,128))
;Resize=(128,128))