ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಖಂಡನೀಯ

| Published : Apr 20 2024, 01:11 AM IST

ಸಾರಾಂಶ

ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸಂಘಟನೆ ಮುಖಂಡರು, ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ನಗರದ ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸಂಘಟನೆ ಮುಖಂಡರು, ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೇದಿಕೆ ಪ್ರಾಂತ್ಯ ಸಹ ಸಂಯೋಜಕ ಸತೀಶ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವಾಗಿದೆ. ಮತೀಯ ಗೂಂಡಾಗಳು ಹಿಂದೂ ಸಮಾಜದ ಮೇಲೆ ದಾಳಿ, ದೌರ್ಜನ್ಯ ನಡೆಸುತ್ತಿರುವ ಘಟನೆಗಳು ನಿರಂತರವಾಗಿ ವರದಿಯಾಗುತ್ತಿವೆ. ಇದರ ಮುಂದುವರೆದ ಭಾಗವಾಗಿ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯ ಹತ್ಯೆ ನಡೆದಿದೆ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಕೋಮುವಾದಿಗಳಿಗೆ ಬಲ ಬಂದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಘಟನೆಗಳಲ್ಲಿ ಮತಾಂಧ ಗುಂಪು ಕಾಂಗ್ರೆಸ್ ಶಾಸಕನ ಮನೆ ಸುಟ್ಟಿತ್ತು. ಇದೀಗ ಕಾಂಗ್ರೆಸ್‌ ಕಾರ್ಪೊರೇಟರ್‌ ಮಗಳ ಕೊಲೆಯಾಗಿದೆ. ಆದರೂ, ಆ ಪಕ್ಷದ ನಾಯಕರು ಮೌನ ವಹಿಸಿದ್ದಾರೆ. ಕಾಂಗ್ರೆಸ್‌ ಜನಪ್ರತಿನಿಧಿ, ಕುಟುಂಬದವರಿಗೇ ರಕ್ಷಣೆ ಇಲ್ಲ. ತಕ್ಷಣವೇ ಸರ್ಕಾರ ತನ್ನ ಓಲೈಕೆ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಎಂ.ವೀರೇಶ, ಸಹ ಸಂಚಾಲಕ ಶಿವಾಜಿ, ಮುಖಂಡರಾದ ಚೇತನ್, ನವೀನ್, ಕಲ್ಲೇಶ, ಗಣೇಶ, ನಾಗರಾಜ, ಶ್ರೀನಿವಾಸ, ಮಧು, ಗಿರೀಶ, ಲಿಂಗರಾಜ, ಅಭಿಷೇಕ್, ವಿಠಲ್ ಇತರರು ಇದ್ದರು.

- - - -19ಕೆಡಿವಿಜಿ55ಃ:

ದಾವಣಗೆರೆಯಲ್ಲಿ ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿದರು.