ಶೋಷಿತ ಸಮುದಾಯಗಳಿಗೆ ಅಸ್ಮಿತೆ ತಂದುಕೊಟ್ಟ ಅರಸು: ಸತೀಶ್

| Published : Aug 22 2025, 01:01 AM IST

ಸಾರಾಂಶ

ಉಳುವವನೆ ಭೂ ಒಡೆಯ ನೀತಿ ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆ ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ.

ಕನ್ನಡಪ್ರಭ ವಾರ್ತೆ ಸಿರುಗುಪ್ಪ

ಉಳುವವನೆ ಭೂ ಒಡೆಯ ನೀತಿ ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆ ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ವಾಲ್ಮೀಕಿ ವಿದ್ಯಾಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ಬಿ.ಎಂ. ಸತೀಶ್ ಹೇಳಿದರು.

ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಅವರು ಶೋಷಿತ ಸಮುದಾಯಗಳ ಹಿತ ಕಾಯಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಹಿಂದುಳಿದ ಸಮುದಾಯಗಳ ಹರಿಕಾರರಾಗಿದ್ದರು. ರಾಜ್ಯವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಅರಸು ಅವರ ಪಾತ್ರ ಮಹತ್ವದ್ದು ಎಂದರು.

ತಹಶೀಲ್ದಾರ್ ಗೌಸಿಯ ಬೇಗಂ, ತಾಪಂ ಇಒ ಪವನ್ ಕುಮಾರ್ , ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ಉಪಾಧ್ಯಕ್ಷೆ ಯಶೋದಾ ಮೂರ್ತಿ, ಕುರುಬರ ಸಂಘದ ಅಧ್ಯಕ್ಷ ದಮ್ಮೂರು ಸೋಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ವಕೀಲರ ಸಂಘದ ಉಪ್ಪಾರ ವೆಂಕೋಬ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಹುಚ್ಚೀರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಡ್ಡೆರು ಸಿದ್ದಯ್ಯ, ಮುಖಂಡರಾದ ಕಾಯಿಪ್ಪಲ್ಲೆ ನಾಗರಾಜ, ಗೋರವರ ಶ್ರೀನಿವಾಸ, ಹನುಮಂತಪ್ಪ, ಸಣ್ಣ ರಾಮಯ್ಯ, ಗಣೇಶ, ಗಾಳೆಪ್ಪ, ಮೀರಾಹುಸೇನ, ಕೆ.ಕೃಷ್ಣ ಇತರರಿದ್ದರು. ಇದೇ ವೇಳೆ ಜಯಂತಿ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದವರು ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.