ಮಹಾತ್ಮ ಗಾಂಧೀಜಿ ಅವರು ಸತ್ಯ, ಅಹಿಂಸೆ, ತ್ಯಾಗ ಹಾಗೂ ಸತ್ಯಾಗ್ರಹದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದ ಮಹಾನ್ ನಾಯಕರು ಎಂದು ವೇದ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಅಧ್ಯಕ್ಷ ಡಾ.ಶಿವಾನಂದ ಕೆಲೂರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಮಹಾತ್ಮ ಗಾಂಧೀಜಿ ಅವರು ಸತ್ಯ, ಅಹಿಂಸೆ, ತ್ಯಾಗ ಹಾಗೂ ಸತ್ಯಾಗ್ರಹದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದ ಮಹಾನ್ ನಾಯಕರು ಎಂದು ವೇದ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಅಧ್ಯಕ್ಷ ಡಾ.ಶಿವಾನಂದ ಕೆಲೂರ ಹೇಳಿದರು.ನಗರದ ವೇದ ಅಕಾಡೆಮಿಯಲ್ಲಿ ಆಚರಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯ ಜನರನ್ನು ಸ್ವಾತಂತ್ರ್ಯ ಚಳವಳಿಯೊಂದಿಗೆ ಒಗ್ಗೂಡಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಶಾಂತಿಯುತ ಹೋರಾಟದ ಶಕ್ತಿಯನ್ನು ಜಗತ್ತಿಗೆ ತೋರಿಸಿಕೊಟ್ಟ ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಮುಖ್ಯ ಅತಿಥಿ ಶಿವಲೀಲಾ ಕೆಲೂರ ಮಾತನಾಡಿ, ಮಹಾನ್ ನಾಯಕರ ಜೀವನ ಮತ್ತು ಆದರ್ಶಗಳನ್ನು ಕೇವಲ ಜಯಂತಿ ಆಚರಣೆಗಳಿಗೆ ಸೀಮಿತಗೊಳಿಸದೆ, ಅವುಗಳನ್ನು ಜೀವನದಲ್ಲಿ ಅನುಸರಿಸುವುದು ನಿಜವಾದ ಗೌರವವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ರಶ್ಮಿ.ಕೆ, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.