ಮಕ್ಕಳು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿಯಾಗಿದೆ. ಇಂತಹ ಚಟುವಟಿಕೆಗಳ ಮೂಲಕ ನಲಿಯುತ್ತ ಕಲಿಯಲು ಕಲಿಕಾ ಹಬ್ಬ ಉತ್ತಮ ವೇದಿಕೆ.

ಸೂಳಗಾರ ಶಾಲೆಯಲ್ಲಿ ನಂದೊಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಯಲ್ಲಾಪುರ

ಮಕ್ಕಳು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿಯಾಗಿದೆ. ಇಂತಹ ಚಟುವಟಿಕೆಗಳ ಮೂಲಕ ನಲಿಯುತ್ತ ಕಲಿಯಲು ಕಲಿಕಾ ಹಬ್ಬ ಉತ್ತಮ ವೇದಿಕೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಹಬ್ಬವನ್ನು ಊರಿನ ಹಬ್ಬದಂತೆ ಮಾದರಿಯಾಗಿ ಆಚರಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಹೇಳಿದರು.

ತಾಲೂಕಿನ ಸೂಳಗಾರ ಪ್ರಾಥಮಿಕ ಶಾಲೆಯಲ್ಲಿ ನಂದೊಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಸಂಯೋಜಕ ಪ್ರಶಾಂತ ಪಟಗಾರ ಮಾತನಾಡಿ, ಕಲಿಕಾ ಹಬ್ಬ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರನ್ನು ಒಟ್ಟುಗೂಡಿಸುವ ಹಬ್ಬವಾಗಿ ಆಚರಣೆಗೊಳ್ಳುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್ಲ ವ್ಯವಸ್ಥೆ, ಪ್ರಬುದ್ಧ ಶಿಕ್ಷಕರು ಇರುವಾಗ ಎಲ್ಲ ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸುವ ಮೂಲಕ ಹಳ್ಳಿಯ ಶಾಲೆಗಳನ್ನು ಉಳಿಸುವಲ್ಲಿ ಸಹಕರಿಸಬೇಕೆಂದರು.

ಎಸ್‌ಡಿಎಂಸಿ ಅಧ್ಯಕ್ಷ ನರಸಿಂಹ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿದ ಅದಿತಿ ಭಟ್ಟ ಅವರನ್ನು ಪುರಸ್ಕರಿಸಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಈಶ್ವರ ರಾಥೋಡ, ತಾಲೂಕು ಸಂಘದ ಕಾರ್ಯದರ್ಶಿ ಸತೀಶ ನಾಯಕ, ಖಜಾಂಚಿ ನಾಗರಾಜ ಹೆಗಡೆ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಗಂಗಾಧರ ಪಟಗಾರ, ವಿ.ಪಿ. ಭಟ್ಟ, ದಿನೇಶ ಭಟ್ಟ, ಪಿಡಿಒ ಪ್ರಭಾಕರ ಭಟ್ಟ, ನಂದೊಳ್ಳಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಗೀತಾ ಹೆಗಡೆ, ವಿವಿಧ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರಾದ ಚಿನ್ಮಯ ಬೆಳ್ಳಿ, ಮಂಜುನಾಥ ಭಟ್ಟ, ಗಂಗಾಧರ ಗುಮ್ಮಾನಿ, ಉಪಾಧ್ಯಕ್ಷೆ ವಾಣಿ ಭಟ್ಟ, ಸಿ.ಆರ್.ಪಿಗಳಾದ ಶಿವಾನಂದ ವೆರ್ಣೆಕರ್, ಚಂದ್ರಹಾಸ ನಾಯ್ಕ, ಶ್ರೀನಿವಾಸ ದೇವಾಡಿಗ, ಅರವಿಂದ ನಾಯ್ಕ, ಪ್ರಭಾಕರ ಭಟ್ಟ, ದೀಪಾ ಶೇಟ್, ಅಮಿತಾ ನಾಯ್ಕ, ವಿಶ್ವನಾಥ ಮರಾಠೆ, ಕಲಾವತಿ ನಾಯಕ ಇತರರಿದ್ದರು.

ಅನನ್ಯ, ಶ್ರಾವ್ಯಾ ಸಂಗಡಿಗರು ಪ್ರಾರ್ಥಿಸಿದರು. ಸಿ.ಆರ್.ಪಿ ಮೋಹನ ನಾಯ್ಕ ಸ್ವಾಗತಿಸಿದರು. ಶಿಕ್ಷಕ ವಿಶಾಲ ನಾಯಕ ನಿರ್ವಹಿಸಿದರು. ಶಾಲೆಯ ಮುಖ್ಯಾಧ್ಯಾಪಕ ಆರ್.ಆರ್. ಭಟ್ಟ ವಂದಿಸಿದರು. ನಂದೊಳ್ಳಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.