ನಾವು ನಮ್ಮ ಹಿರಿಯರನ್ನು ನೆನಪಿಸಿಕೊಳ್ಳುವ ಮೂಲಕ ಅವರ ಜೀವನ, ವಿಚಾರ, ಸಂಸ್ಕಾರಗಳನ್ನು ಇಂದಿನ ಮಕ್ಕಳಿಗೆ ತಿಳಿಸುವುದರಿಂದ ಅವರಿಗೆ ಬದುಕಿನ ನಾಳೆಯ ಅರಿವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.

ಮಂಗಳೂರು : ನಾವು ನಮ್ಮ ಹಿರಿಯರನ್ನು ನೆನಪಿಸಿಕೊಳ್ಳುವ ಮೂಲಕ ಅವರ ಜೀವನ, ವಿಚಾರ, ಸಂಸ್ಕಾರಗಳನ್ನು ಇಂದಿನ ಮಕ್ಕಳಿಗೆ ತಿಳಿಸುವುದರಿಂದ ಅವರಿಗೆ ಬದುಕಿನ ನಾಳೆಯ ಅರಿವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.

ಅವರು ಭಾನುವಾರ ನಗರದ ಬಂಟ್ಸ್‌ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಉಮ್ಮಕ್ಕೆನೆಂಪು ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಕರಾವಳಿ ಲೇಖಕಿಯರ ವಾಚಕಿಯರ ಸಂಘ ಮಂಗಳೂರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಉಮ್ಮಕ್ಕೆನೆಂಪು, ದತ್ತಿನಿಧಿ ಉಪನ್ಯಾಸ, ಸಂತಕವಿ ಕನಕದಾಸ ಪ್ರಶಸ್ತಿ ಪ್ರದಾನ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎ.ರೋಹಿಣಿಗೆ ಪ್ರಶಸ್ತಿ ಪ್ರದಾನ:ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಲೇಖಕಿ ಬಿ.ಎಂ.ರೋಹಿಣಿ ಅವರಿಗೆ ಕಾರ್ಯಕ್ರಮದಲ್ಲಿ ಸಂತಕವಿ ಕನಕದಾಸ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಜ್ಯೋತಿ ಅಭಿನಂದನಾ ಪತ್ರ ವಾಚಿಸಿದರು. ನಿವೃತ್ತ ಪ್ರಾಧ್ಯಾಪಕಿ ಡಾ.ರಾಜಲಕ್ಷ್ಮಿ ಎನ್.ಕೆ. ಉಮ್ಮಕ್ಕೆ ನೆಂಪು ಪಾತೆರಕತೆಯ ದತ್ತಿ ಉಪನ್ಯಾಸ ಮತ್ತು 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಆರ್ಥಿಕವಾಗಿ ಹಿಂದುಳಿದ ಮೂವರು ವಿದ್ಯಾರ್ಥಿಗಳಿಗೆ ನಗದು, ಗೌರವ ಪುರಸ್ಕಾರ ನೀಡಲಾಯಿತು.ಕರಾವಳಿ ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ಎಸ್‌ಆರ್‌ ಹೆಗ್ಡೆ ಚಾರಿಟೇಬಲ್‌ ಟ್ರಸ್ಟ್‌ ಸುರತ್ಕಲ್‌ ಅಧ್ಯಕ್ಷೆ ಡಾ.ಇಂದಿರಾ ಹೆಗ್ಗಡೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್‌ ಮತ್ತಿತರರು ಇದ್ದರು.ಟ್ರಸ್ಟ್‌ ಅಧ್ಯಕ್ಷ ಪ್ರೊ.ಬಿ.ಶಿವರಾಮ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಪ್ರೊ.ಕೃಷ್ಣಮೂರ್ತಿ ಸ್ವಾಗತಿಸಿದರು. ನಾದ ಮಣಿನಾಲ್ಕೂರು ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು.