ಸಾರಾಂಶ
ಶೂರ್ಪಾಲಿ ಗ್ರಾಮದ ಆರಾಧ್ಯದೈವ ಲಕ್ಷ್ಮೀನರಸಿಂಹ ದೇವರ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನ ಶೂರ್ಪಾಲಿ ಗ್ರಾಮದ ಆರಾಧ್ಯದೈವ ಲಕ್ಷ್ಮೀನರಸಿಂಹ ದೇವರ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಭಾಗಿಯಾಗಿದ್ದರು. ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಉದಯರಾಗ, ನಿರ್ಮಾಲಯ ವಿಸರ್ಜನೆ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಸುವರ್ಣ ಕವಚ ಧಾರಣೆ ಮಹಾಮಂಗಳಾರತಿ ಮುಂತಾದ ವಿಧಿವಿಧಾನಗಳ ಮೂಲಕ ಸ್ವಾಮಿಯನ್ನು ಪೂಜಿಸಲಾಯಿತು. ಹೋಮ ಹವನಗಳು ಮಹಾ ಮಂಗಳಾರತಿ ಕಾರ್ಯಕ್ರಮ ನಡೆದವು.
ಪಂಡಿತರಿಂದ ಉಪನ್ಯಾಸ ಹಾಗೂ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿ ಜಾತ್ರೆಯ ಪ್ರಯುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಶೂರ್ಪಾಲಿ ಗ್ರಾಮದ ಹಿರಯರು, ಪಂಚಾಯತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.