ಸಾರಾಂಶ
- ಗೆಲ್ಲಿಸಿ, ಪ್ರಥಮ ಸಂಸದೆಯಾಗಿಸಿ: ಡಾ.ಪ್ರಭಾ ಮನವಿ । ಪತ್ನಿ ಡಾ.ಪ್ರಭಾ ಪರ ಸಚಿವ ಮಲ್ಲಿಕಾರ್ಜುನ ಮತಯಾಚನೆ
- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡುತ್ತಾ ಬಂದ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ಮಹಿಳೆಯರಿಗೆ ಅವಕಾಶ ನೀಡಿದೆ. ಈಗ ದಾವಣಗೆರೆ ಲೋಕಸಭಾ ಕ್ಷೇತ್ರ ಸ್ಪರ್ಧೆಗೆ ತಮಗೆ ಅವಕಾಶ ನೀಡಿದ್ದು, ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಗೆಲ್ಲಿಸಿ, ಪ್ರಥಮ ಸಂಸದೆಯಾಗಿಸಬೇಕು ಎಂದು ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದರು.ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಸೋಮವಾರ ನವೋದಯ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಈ ಸಲ ಮಹಿಳೆಯರಿಗೆ ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಪ್ರೋತ್ಸಾಹಿಸಿದೆ. ಮಹಿಳೆಯರಿಗಾಗಿ ಸಾಕಷ್ಟು ಯೋಜನೆ, ಕಾರ್ಯಕ್ರಮ ರೂಪಿಸುಸಿರುವುದು ಕಾಂಗ್ರೆಸ್ ಹೆಗ್ಗಳಿಗೆ ಎಂದರು.
ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಮಹಿಳೆಯರಿಗೆ ನೀಡಿದ್ದ ಆಶ್ವಾಸನೆ ಈಡೇರಿಸಿದೆ. ಗೃಹಲಕ್ಷ್ಮೀ, ಶಕ್ತಿ ಯೋಜನೆ ಸಂಪೂರ್ಣ ಜಾರಿಗೊಂಡಿದೆ. ದಾವಣಗೆರೆಯಲ್ಲೂ ಸುಮಾರು ₹1017 ಕೋಟಿ ಹಣ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮೀ ಯೋಜನೆಯಡಿ ವಾರ್ಷಿಕ ₹1 ಲಕ್ಷ, ಕೇಂದ್ರದ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಸೇರಿದಂತೆ 5 ಯೋಜನೆಗಳ ಜಾರಿಗೊಳಿಸಲಿದೆ ಎಂದು ತಿಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿ, ಮಹಿಳಾ ಸಬಲೀಕಣಕ್ಕೆ ಕಾಂಗ್ರೆಸ್ ವಿಶೇಷ ಒತ್ತು ನೀಡಿದೆ. ರಾಜ್ಯದಲ್ಲಿ ಈ ಸಲ ಲೋಕಸಭೆ ಚುನಾವಣೆಗೆ 6 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಎಲ್ಲ ಆರೂ ಮಹಿಳೆಯರೂ ರಾಜ್ಯದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಸಂಸದರಾಗಿ ಲೋಕಸಭೆಯಲ್ಲಿ ರಾಜ್ಯದ ಮಹಿಳೆಯರ ಧ್ವನಿಯಾಗಿ ಈ ಮಹಿಳಾ ಸಂಸದರು ಕೆಲಸ ಮಾಡಲಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ, ಮಾಜಿ ಅಧ್ಯಕ್ಷ ಜೆ.ಆರ್. ಷಣ್ಮುಖಪ್ಪ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಬೆಂಬಲ ಸೂಚಿಸಲು ಇಲ್ಲಿ ಆರೇಳು ಸಾವಿರ ಮಹಿಳೆಯರು ಸೇರಿದ್ದಾರೆ. ಈ ಸಲ ಡಾ.ಪ್ರಭಾ ಅವರ ಗೆಲುವು ನಿಶ್ಚಿತ. ಮಹಿಳಾ ಅಭಿವೃದ್ಧಿ, ದಾವಣಗೆರೆ ಜಿಲ್ಲೆ, ಕ್ಷೇತ್ರದ ಅಭಿವೃದ್ಧಿಗೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಅಧಿಕಾರ ನೀಡೋಣ ಎಂದರು.ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯ, ಕೇಂದ್ರ ಹಾಗೂ ಸ್ಥಳೀಯವಾಗಿ ತ್ರಿಬಲ್ ಎಂಜಿನ್ ಸರ್ಕಾರ ರಚಿಸುತ್ತೇವೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿ ಕೆಲಸ ಕೈ ಹಿಡಿಯಲಿದ್ದು, ಜನರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕೋರಿದರು.
ಹಿರಿಯ ಸಮಾಜ ಸೇವಕಿ ಕಿರುವಾಡಿ ಗಿರಿಜಮ್ಮ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಶಾಸಕ ಡಿ.ಸಿ. ತಮ್ಮಣ್ಣ, ಕಾಂಗ್ರೆಸ್ ಮುಖಂಡರಾದ ಹಿರಿಯ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಐಗೂರು ಚಂದ್ರಶೇಖರ, ಕಲ್ಪನಹಳ್ಳಿ ಸೋಮಶೇಖರಪ್ಪ, ಸಿಬ್ಬಂದಿ ಮಮತಾ, ರೇಣುಕಾ, ಬಸಮ್ಮ ಇತರರು ಇದ್ದರು.- - - -29ಕೆಡಿವಿಜಿ7:
ದಾವಣಗೆರೆಯಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಪರ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತಯಾಚಿಸಿದರು. -29ಕೆಡಿವಿಜಿ8:ದಾವಣಗೆರೆಯಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವ ಕಾರ್ಯಕ್ರಮವನ್ನು ಡಾ.ಪ್ರಭಾ ಮಲ್ಲಿಕಾರ್ಜುನ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸಭೆ ಉದ್ಘಾಟಿಸಿದರು. -29ಕೆಡಿವಿಜಿ9, 10:
ದಾವಣಗೆರೆಯಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚಿಸಿ, ಮಾತನಾಡಿದರು. -29ಕೆಡಿವಿಜಿ11:ದಾವಣಗೆರೆಯಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಡಾ.ಪ್ರಭಾ ಪರ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತಯಾಚಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))