ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗುವುದು ಅಪರೂಪ. ಅಂತಹ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ಸಾಧನೆ ಮಾಡಲು ಅಗತ್ಯವಿರುವ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ಸೌಲಭ್ಯಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ .
ದಾಬಸ್ಪೇಟೆ; ಮಕ್ಕಳಲ್ಲಿ ಕೇವಲ ಅಂಕ ಗಳಿಕೆಯಷ್ಟೇ ಮುಖ್ಯವಲ್ಲ, ಅವರಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆಯನ್ನು ಹೊರತರುವುದು ಶಿಕ್ಷಣದ ಮುಖ್ಯ ಉದ್ದೇಶ ಎಂದು ಎಸ್ ಡಿಎಂಸಿ ಅಧ್ಯಕ್ಷ ರಾಮಯ್ಯ ತಿಳಿಸಿದರು.
ಸೋಂಪುರ ಹೋಬಳಿಯ ಲಕ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಸೋಂಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಒಂದು ಅದ್ಭುತ ಅವಕಾಶವನ್ನು ಕಲ್ಪಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.ಶಾಲಾ ಮುಖ್ಯಶಿಕ್ಷಕಿ ಗೋಪಾಲ್ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ. ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಕ್ಕಳಲ್ಲಿರುವ ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ತಾಲೂಕು ಅಧ್ಯಕ್ಷ ಪುಟ್ಟರುದ್ರಾರಾಧ್ಯ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗುವುದು ಅಪರೂಪ. ಅಂತಹ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ಸಾಧನೆ ಮಾಡಲು ಅಗತ್ಯವಿರುವ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ಸೌಲಭ್ಯಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ ಎಂದರು.ಈ ಸಂದರ್ಭದಲ್ಲಿ ಸಿಆರ್ ಪಿ ರಾಮಕೃಷ್ಣ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನಾಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗಿರೀಶ್, ಸೋಂಪುರ ಶಾಲೆಯ ಮುಖ್ಯಶಿಕ್ಷಕ ಹನುಮಂತರಾಜು, ನಿಡವಂದ ಶಾಲೆಯ ರಾಜಣ್ಣ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.