ಸಾರಾಂಶ
ಶೃಂಗೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ರಾಹುಲ್ ಗಾಂಧಿ, ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು.
ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದ ಸಂದರ್ಭ
ಶೃಂಗೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ರಾಹುಲ್ ಗಾಂಧಿ, ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು.ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನವಂಬರ್ ಕ್ರಾಂತಿ, ಸಿಎಂ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ತಾವು ಡಿಸಿಎಂ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ದೇವರ ಇಚ್ಚೆ ಎಂದರು. ಬೆಳೆ ವಿಮೆ, ಫಸಲ್ ಭೀಮ ಯೋಜನೆ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ ಎಂದಾಗ ಸದ್ಯದಲ್ಲಿ ಬಿಡುಗಡೆಯಾಗಲಿದೆ. ರಾಜ್ಯಅಭಿವೃದ್ಧಿ ಪಥದಲ್ಲಿದೆ.ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆ.ನಾನು ಶಾರದಾಂಬೆಯ ಭಕ್ತನಾಗಿದ್ದು,ಅಮ್ಮನವರ ದರ್ಶನಕ್ಕೆ ಬಂದಿದ್ದೇನೆ. ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು. ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಮಠದ ಆವರಣದಲ್ಲಿರುವ ಶ್ರೀ ತೋರಣಗಣಪತಿ ಸನ್ನಿದಿಯಲ್ಲಿ 25 ಈಡುಗಾಯಿಗಳನ್ನು ಒಡೆದರು.ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ,ತಾಲೂಕು ಕಾಂಗ್ರೇಸ್ ಅಧ್ಯಕ್ಷ ರಮೇಶ್ ಭಟ್,ಉಮೇಶ್ ಪುದುವಾಳ್ ಮತ್ತಿತರರು ಇದ್ದರು.
6 ಶ್ರೀ ಚಿತ್ರ 4-ಶೃಂಗೇರಿ ಶಾರದಾ ಪೀಠಕ್ಕೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.6 ಶ್ರೀ ಚಿತ್ರ 5-ಶೃಂಗೇರಿ ಶ್ರೀ ತೋರಣಗಣಪತಿ ಸನ್ನಿದಿಯಲ್ಲಿ ಸಚಿವ ಚೆಲುವರಾಯಸ್ವಾಮಿ 25 ಈಡುಗಾಯಿಗಳನ್ನು ಒಡೆಯುತ್ತಿರುವುದು.
;Resize=(128,128))
;Resize=(128,128))
;Resize=(128,128))