ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲು ಸಭೆಯಲ್ಲಿ ನಿರ್ಧಾರ

| Published : Jan 24 2024, 02:06 AM IST

ಸಾರಾಂಶ

ವಿವಿಧ ಇಲಾಖೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಸಾಧಕರನ್ನು ಸನ್ಮಾನ ಮಾಡಲು ಕೂಡ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹುನಗುಂದ

ಜ.26 ರಂದು 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಟಿಸಿಎಚ್ ಕಾಲೇಜು ಮೈದಾನದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಯಿತು. ವಿವಿಧ ಇಲಾಖೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಹಸೀಲ್ದಾರ್‌ ನಿಂಗಪ್ಪ ಬಿರಾದಾರ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ನಡೆದ ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿನ 75ನೇ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿಸಿ ಮಾತನಾಡಿದ ಅವರು, ಪ್ರತಿಯೊಂದು ಇಲಾಖೆಯಲ್ಲಿ ಜ.26 ರ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಬೆಳಗ್ಗೆ 9 ಗಂಟೆಗೆ ತಾಲೂಕಾಡಳಿತ ವತಿಯಿಂದ ಜರುಗುವ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.

ಪೊಲೀಸ್ ಇಲಾಖೆ ನೇತೃತ್ವದಲ್ಲಿ ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್ ಧ್ವಜವಂದನೆಯ ಪಥಸಂಚಲನ ನಡೆಯಲಿದೆ. ವಿವಿಧ ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಇಲಾಖೆಯ ವಿಶೇಷ ಕಾರ್ಯಕ್ರಮಗಳಿಗೆ ಚಾಲನೆ ಮತ್ತು ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಮತ್ತು ಪ್ರಶಸ್ತಿ ವಿತರಣೆ ನಡೆಯಲಿದೆ ಎಂದರು.

ಬಿಇಓ ಜಾಸ್ಮಿನ್ ಕಿಲ್ಲೇದಾರ, ಸಮಾಜ ಕಲ್ಯಾಣ ಅಧಿಕಾರಿ ಎಂ.ಎಚ್. ಕಟ್ಟಿಮನಿ, ಸಿಡಿಪಿಒ ಅನ್ನಪೂರ್ಣ ಕುಬಕಟ್ಟಿ, ಕೃಷಿ ಅಧಿಕಾರಿ ಬವರಾಜ ಟಕ್ಕಳಗಿ, ತಾ.ಪಂ ಎಡಿ ಮಹಾಂತೇಶ ಕೋಟಿ, ಇಳಕಲ್ಲ ಗ್ರೇಡ್2 ತಹಸೀಲ್ದಾರ್‌ ಈಶ್ವರ ಗಡ್ಡಿ, ಪಿಎಸ್‌ಐ ಎಸ್.ಆರ್.ನಾಯಕ, ಶಿರಸ್ತೇದಾರ ಶ್ರವಣಕುಮಾರ ಮುಂಡೆವಾಡಿ, ನಾಗರಾಜ ಹೊಸೂರ, ಶಿಕ್ಷಕ ಎಸ್.ಕೆ. ಕೊನೆಸಾಗರ, ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.