ಸಾರಾಂಶ
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.
ಹೊಸಪೇಟೆ: ತಾಲೂಕಿನ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಘಟ್ಟ ಹಾಗೂ ಬೆನಕಾಪುರ ಗ್ರಾಮದ ಬಳಿ ಗುರುತಿಸಿರುವ ಸಕ್ಕರೆ ಕಾರ್ಖಾನೆ ಜಾಗಕ್ಕೆ ಶನಿವಾರ ಭೇಟಿ ನೀಡಿ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಪರಿಶೀಲಿಸಿದರು.
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.ಬಳಿಕ ಸ್ಥಳದಲ್ಲಿದ್ದ ಹೊಸಪೇಟೆ ಉಪವಿಭಾಗಾಧಿಕಾರಿ ನೊಂಗ್ಜಾಯ್ ಮಹಮದ್ ಅಲಿ ಅಕ್ರಮ್ ಷಾ ಅವರಿಗೆ ಈ ಸ್ಥಳದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿಜಯನಗರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು.
ಶಾಸಕ ಎಚ್.ಆರ್. ಗವಿಯಪ್ಪ, ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಮುಖಂಡರಾದ ಬಿ.ವಿ. ಶಿವಯೋಗಿ, ಗುಜ್ಜಲ ನಾಗರಾಜ, ಗುಜ್ಜಲ ನಾಗರಾಜ, ರಾಮಚಂದ್ರ ಗೌಡ, ಬಂಗಿ ಮಂಜುನಾಥ, ಅಂಜಿನಪ್ಪ, ವೆಂಕಟೇಶ್ ರೆಡ್ಡಿ ಇತರರಿದ್ದರು.೧೬ ಎಚ್‌ಪಿಟಿ ೫-ಸಚಿವ ಶಿವಾನಂದ ಪಾಟೀಲ್, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಜಾಗ ಪರಿಶೀಲಿಸಿದರು.