ಯುವನಿಧಿಗೆ ಚಾಲನೆ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಸಚಿವ

| Published : Jan 08 2024, 01:45 AM IST

ಸಾರಾಂಶ

ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ಹಿನ್ನೆಲೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭಾನುವಾರ ಫ್ರೀಡಂ ಪಾರ್ಕ್‌ಗೆ ಭೇಟಿ ಪರಿಶೀಲನೆ ನಡೆಸಿದರು.

ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

- - -

ಬಾಕ್ಸ್‌ ಕಾಲೇಜು ಪ್ರಾಚಾರ್ಯರಿಗೆ ಸೂಚನೆ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನೆರವಾಗಿ ಎಂದು ಜಿಲ್ಲೆಯ ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

- - - -7ಎಸ್‌ಎಂಜಿಕೆಪಿ05:

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭಾನುವಾರ ಫ್ರೀಡಂ ಪಾರ್ಕ್‌ಗೆ ಭೇಟಿ ಸ್ಥಳ ಪರಿಶೀಲನೆ ನಡೆಸಿದರು.