ಸಾರಾಂಶ
ಕಟ್ಟಡದ ನೆಲ ಅಂತಸ್ತಿನ ಮಳಿಗೆಯೊಳಗಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ್ದು, ಬೆಂಕಿಯ ಜ್ವಾಲೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದ ಕಟ್ಟಡದೊಳಗೆ ಪೂರ್ತಿ ಹೊಗೆ ಆವರಿಸಿಕೊಂಡಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಲ್ಯಾನ್ಸ್ ಡೌನ್ ಕಟ್ಟಡದಲ್ಲಿ ಬಿದ್ದಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.ಕಟ್ಟಡದ ನೆಲ ಅಂತಸ್ತಿನ ಮಳಿಗೆಯೊಳಗಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ್ದು, ಬೆಂಕಿಯ ಜ್ವಾಲೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದ ಕಟ್ಟಡದೊಳಗೆ ಪೂರ್ತಿ ಹೊಗೆ ಆವರಿಸಿಕೊಂಡಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ನಗರ ಪಾಲಿಕೆಯಿಂದ ಕಟ್ಟಡದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸದೇ ಇದ್ದುದ್ದರಿಂದ ಈ ಬೆಂಕಿ ಅನಾಹುತ ಸಂಭವಿಸಿದೆ. ಇದಕ್ಕೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹಾಗೂ ಅಂಗಡಿ ಮಾಲೀಕರು ಆರೋಪಿಸಿದ್ದಾರೆ.