ಅತ್ಯಂತ ಪವಿತ್ರವಾದ ವೃತ್ತಿ ಶಿಕ್ಷಕ ವೃತ್ತಿ

| Published : Sep 06 2025, 02:00 AM IST

ಸಾರಾಂಶ

ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಹೇಳಿದರು.

ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಡಾ.ಸರ್ವಪಲ್ಲಿ ರಾಧಾಕೃಷ್ಣನ ರವರ 138ನೇ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ನಿವೃತ್ತ ಹಾಗೂ ಉತ್ತಮ ಶಿಕ್ಷಕರನ್ನು ಸತ್ಕರಿಸಿ ಮಾತನಾಡಿದ ಅವರು, ಶಿಕ್ಷಕರನ್ನು ಗೌರವಿಸುವ ಈ ದಿನ ಮಹತ್ವದ ದಿನವಾಗಿದೆ. ಅತ್ಯಂತ ಪವಿತ್ರವಾದ ವೃತ್ತಿ ಶಿಕ್ಷಕ ವೃತ್ತಿಯಾಗಿದೆ ಎಂದರು.ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆಯನ್ನು ಮಾಡಿ ಭವ್ಯ ರಥದಲ್ಲಿ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರದೊಂದಿಗೆ ಸಮಾರಂಭದ ವೇದಿಕೆಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು.

ವೇದಿಕೆಯ ಮೇಲೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಟಿ.ಆರ್.ಕಾಗಲ, ಎಂ.ಎಲ್.ತೋಳಿನವರ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ತಹಸೀಲ್ದಾರ್‌ ಡಾ.ಮೋಹನ ಭಸ್ಮೆ, ತಾಲೂಕು ಮಟ್ಟದ ಅಧಿಕಾರಿಗಳಾದ ಪರಶುರಾಮ ಘಸ್ತೆ, ಎಂ.ಎಲ್.ಜನ್ಮಟ್ಟಿ, ಎ.ಬಿ.ಮಲಬನ್ನವರ, ಎಂ.ಎಸ್.ಬಾಗಡಿ, ಎಸ್.ಪಿ.ವರಾಳೆ, ಬಿ.ಎಸ್.ಕುಡುವಕ್ಕಲಿಗ, ಎಲ್.ಕೆ.ತೋರಣಗಟ್ಟಿ, ನೌಕರರ ಸಂಘದ ತಾಲೂಕಾಧ್ಯಕ್ಷ ವಿನಾಯಕ ಮಾಳಿ, ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರುಗಳಾದ ಎಂ.ವಿ.ಬಾಗೆನ್ನವರ, ಜಿ.ಆರ್.ಸನದಿ ಇದ್ದರು.ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನು ಸಮಾಜ ಗೌರವಿಸುವ ವ್ಯಕ್ತಿಗಳನ್ನಾಗಿಸಿ ದೇಶ ಕಟ್ಟುವ ಶಿಲ್ಪಿಗಳನ್ನಾಗಿಸಿದ್ದಾರೆ. ಗೋಕಾಕ ವಲಯದ ವಿಭಿನ್ನ ಕಾರ್ಯಕ್ರಮಗಳ ಮೂಲಕ ಗುರುಗಳ ಮಹತ್ವವನ್ನು ಹೆಚ್ಚಿಸುತ್ತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.

-ಲಖನ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯರು.