ಸಾರಾಂಶ
ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಆರೋಪಿಸಿದ್ದಾರೆ.
ಕೋಲಾರ:ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅನ್ನಭಾಗ್ಯದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು ಇದರ ಭಾಗವಾಗಿಯೇ ಬಡವರ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯ, ಬಡವರ ಅನ್ನಕ್ಕೆ ಕೈಹಾಕಿದೆ ಕೂಡಲೇ ಈ ಆದೇಶ ವಾಪಸ್ಸು ಪಡೆಯುವಂತೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಒತ್ತಾಯಿಸಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶ ಜಾರಿ ಮಾಡಲು ಹೊರಟಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.