ವಾಂತಿ-ಭೇದಿ ಪ್ರಕರಣ: ಜೋಳದಾಳಿನಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಂಸದೆ

| Published : Sep 02 2024, 02:04 AM IST

ವಾಂತಿ-ಭೇದಿ ಪ್ರಕರಣ: ಜೋಳದಾಳಿನಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಂಸದೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿಯಿಂದ ಬಳಲುತ್ತಿರುವವರ ಸಂಖ್ಯೆ ನಾಲ್ಕು ದಿನಗಳಿಂದ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಾಸ್ತವಾಂಶ ತಿಳಿಯಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾನುವಾರ ಸಂಜೆ ಜೋಳದಾಳು ಗ್ರಾಮಕ್ಕೆ ಭೇಟಿ ನೀಡಿ ಅಸ್ವಸ್ಥರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿದರು.

- ಅಸ್ವಸ್ಥರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಂಸದೆ ಸಲಹೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿಯಿಂದ ಬಳಲುತ್ತಿರುವವರ ಸಂಖ್ಯೆ ನಾಲ್ಕು ದಿನಗಳಿಂದ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಾಸ್ತವಾಂಶ ತಿಳಿಯಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾನುವಾರ ಸಂಜೆ ಜೋಳದಾಳು ಗ್ರಾಮಕ್ಕೆ ಭೇಟಿ ನೀಡಿ ಅಸ್ವಸ್ಥರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿದರು.

ಅಸ್ವಸ್ಥರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಚನ್ನಗಿರಿಯ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಸದಾ ಜಾಗೃತರಾಗಿದ್ದು ಸಕಾಲಕ್ಕೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಈ ವ್ಯಾದಿ ಉಲ್ಬಣಿಸದಂತೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಗ್ರಾಪಂ ಅಧಿಕಾರಿಗಳಿಗೆ, ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು. ಅಲ್ಲದೇ, ಶುದ್ಧ ಕುಡಿಯುವ ನೀರು ಹಾಗೂ ಗ್ರಾಮದ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಅಭಿಯಂತರ ಲೋಹಿತ್, ಡಾ.ಪವಿತ್ರ ಸಂತೋಷ್, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್ ತಳವಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಶಶಿಕುಮಾರ್, ಗ್ರಾಮಸ್ಥರು ಹಾಜರಿದ್ದರು.

- - - -1ಕೆಸಿಎನ್‌ಜಿ5:

ಜೋಳದಾಳಿನಲ್ಲಿ ಅಸ್ವಸ್ಥರ ಮನೆಗಳಿಗೆ ತೆರಳಿದ ಸಂಸದೆ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದರು. -1ಕೆಸಿಎನ್‌ಜಿ6:

ಜೋಳದಾಳಿನಲ್ಲಿ ವಾಂತಿ-ಭೇದಿ ಪ್ರಕರಣ ಬಾಧಿಸಿರುವ ಕುರಿತು ಮಾಹಿತಿ ಪಡೆದ ಸಂಸದೆ ಡಾ.ಪ್ರಭಾ, ಸಮಸ್ಯೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದರು.