ಸಾರಾಂಶ
ಬೆಳಗಾವಿ: ತಮಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ತಮಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಮಂಗಲಅಂಗಡಿ ಪ್ರಯಾಣ ಬೆಳೆಸಿದ್ದರೆ, ಅವರ ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ನಾಯಕರನ್ನು ಭೇಟಿಯಾಗಿ ಇನ್ನೊಂದು ಅವಧಿಗೆ ಕುಟುಂಬಕ್ಕೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ.
ಇತ್ತೀಚೆಗೆ ತಮ್ಮ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕುಟುಂಬಕ್ಕೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ದೆಹಲಿಲ್ಲಿ ಬೀಡುಬಿಟ್ಟಿರುವ ಅಂಗಡಿ ಕುಟುಂಬ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅಂಗಡಿ ಕುಟುಂಬದ ಪರವಾಗಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಕೂಡ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.