ಮುಡಾ ಕೇಸ್‌ ಸಿಬಿಐಗೆ ವಹಿಸಿದ್ರೆ ಸಿದ್ದು ಜೈಲಿಗೆ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

| Published : Nov 09 2024, 01:10 AM IST / Updated: Nov 09 2024, 05:40 AM IST

ಮುಡಾ ಕೇಸ್‌ ಸಿಬಿಐಗೆ ವಹಿಸಿದ್ರೆ ಸಿದ್ದು ಜೈಲಿಗೆ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ ಹಗರಣವನ್ನು ಲೋಕಾಯುಕ್ತದಿಂದ ಸಿಬಿಐ ತನಿಖೆಗೆ ವಹಿಸಬೇಕು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದರು.

 ಸಂಡೂರು : ಮುಡಾ ಹಗರಣವನ್ನು ಲೋಕಾಯುಕ್ತದಿಂದ ಸಿಬಿಐ ತನಿಖೆಗೆ ವಹಿಸಬೇಕು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದರು.

ಸಂಡೂರು ತಾಲೂಕಿನ ವಿವಿಧೆಡೆ ಶುಕ್ರವಾರ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರ ನಡೆಸಿ, ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಹಗಲು ದರೋಡೆಯಲ್ಲಿ ಮುಳುಗಿದೆ. ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು. ಸರ್ಕಾರದ ಖಜಾನೆಯ ಲೂಟಿಯಲ್ಲಿ ತೊಡಗಿರುವ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಉಳಿಸಿಕೊಂಡಿಲ್ಲ.

ಮುಡಾ ಹಗರಣ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಸಿಬಿಐ ತನಿಖೆ ಆಗುವುದರಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಲ್ಲ ನಾಳೆ ರಾಜೀನಾಮೆ ನೀಡಿ ಜೈಲಿಗೆ ಹೋಗುವುದು ನಿಶ್ಚಿತ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನ ನೀಡಿದ ತೆರಿಗೆ ಹಣವನ್ನು ಲೂಟಿ ಮಾಡುತ್ತಾ, ಜನ ಹಿತವನ್ನು ಮರೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ನೀರಾವರಿ ಯೋಜನೆಗಳು ನಿಂತಿವೆ. ವಿದ್ಯುತ್ ದರ ಜಾಸ್ತಿಯಾಗಿದೆ. ಕಿಸಾನ್ ಸಮ್ಮಾನ್ ಸಹಾಯಧನಕ್ಕೆ ನಮ್ಮ ಸರ್ಕಾರ ನೀಡುತ್ತಿದ್ದ 4000 ರು. ಹಣವನ್ನು ಈಗಿನ ರಾಜ್ಯ ಸರ್ಕಾರ ನಿಲ್ಲಿಸಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ ಎಂದು ಟೀಕಿಸಿದರು.