ಅಂಗಡಿಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರಲಿ

| Published : Jun 28 2024, 12:46 AM IST

ಅಂಗಡಿಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರಲಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಅಂಗಡಿ ಮುಂಗಟ್ಟು ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ ಬೆಳಗುಂದಿ ಹೇಳಿದರು.

ಕನ್ನಡಪ್ರಭ ವಾರ್ತೆ ಗುರುಮಠಕಲ್

ಪ್ರತಿ ಅಂಗಡಿ ಮುಂಗಟ್ಟು ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ ಬೆಳಗುಂದಿ ಹೇಳಿದರು.

ಸೈದಾಪುರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ, ಅಂಗಡಿ ಮುಂಗಟ್ಟುಗಳ ನಾಮಫಕ ಕಡ್ಡಾಯವಾಗಿ ಕನ್ನಡದಲ್ಲಿ ಬರೆಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುದುಕಣ್ಣ ಅವರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬರವಣಿಗೆ ಇರಬೇಕೆಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದರೂ, ಇನ್ನೂ ಕೆಲವರು ನಿರ್ಲಕ್ಷ ತೋರುತ್ತಿದ್ದಾರೆ. ಒಂದು ವೇಳೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳಲು ನಿರಾಕರಿಸಿದರೆ ಅಂತಹ ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು. ಇಲ್ಲವಾದರೆ ನಾವೇ ಖುದ್ದಾಗಿ ನಾಮಫಲಕಗಳಿಗೆ ಮಸಿ ಬಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಸವರಾಜ ನಾಯಕ, ಸೈದಾಪುರ ವಲಯಾಧ್ಯಕ್ಷ ಸಾಗರ ಹುಲ್ಲೇರ್, ಮಲ್ಲು ಬಾಡಿಯಾಲ, ತೈಸಿನ್, ಆಂಜನೇಯ ಬಾಗ್ಲಿ, ರಾಘು ಇಂದಿರಾನಗರ ಸೇರಿದಂತೆ ಇತರರಿದ್ದರು.