ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಮಾಲೀಕರ ಮತ್ತು ಉಳ್ಳವರ ಸಂಹಿತೆಗಳಾಗಿವೆ. ನೂರಾರು ವರ್ಷ ಹೋರಾಟ ಮಾಡಿ ಪಡೆದ ಕಾರ್ಮಿಕ ಹಕ್ಕುಗಳನ್ನು ಇವು ನಿರಾಕರಿಸುತ್ತವೆ ಎಂದು ಎಂದು ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಆರೋಪಿಸಿದರು

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಮಾಲೀಕರ ಮತ್ತು ಉಳ್ಳವರ ಸಂಹಿತೆಗಳಾಗಿವೆ. ನೂರಾರು ವರ್ಷ ಹೋರಾಟ ಮಾಡಿ ಪಡೆದ ಕಾರ್ಮಿಕ ಹಕ್ಕುಗಳನ್ನು ಇವು ನಿರಾಕರಿಸುತ್ತವೆ ಎಂದು ಎಂದು ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಆರೋಪಿಸಿದರು.

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಕರ್ನಾಟ ಸಂಯುಕ್ತ ಹೋರಾಟದ ಮುಷ್ಕರ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ ಕಾರ್ಮಿಕರ ವಿರುದ್ಧ 4 ಕಾರ್ಮಿಕ ಮಸೂದೆಗಳನ್ನು ಜಾರಿಗೊಳಿಸಿದ್ದು ಕಾರ್ಮಿಕರಿಗೆ ಮಾರಕವಾದ ಈ ಮಸೂದೆಗಳನ್ನು ರದ್ದುಗೊಳಿಸಬೇಕು. ಬಡವರ ಜೀವನಧಾರವಾಗಿರುವ ನರೇಗಾ ಯೋಜನೆಯನ್ನು ಪುನ‌ರ್ ಸ್ಥಾಪಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಹಾಗೂ ಭೂ ಸ್ವಾಧೀನ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕಾರ್ಮಿಕರು ಮುಂದಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ದೇಶದ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಲುವು ಬದಲಾಗಬೇಕು, ರೈತರಿಗೆ ಮಾರಕವಾಗಿರುವ ಬೀಜ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು, ವಿಮಾ ತಿದ್ದುಪಡಿ ಕಾಯ್ದೆ. ಶಾಂತಿ ಕಾಯ್ದೆರದ್ದುಗೊಳಿಸಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್ ಅನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಫೆ.12ಕ್ಕೆ ದೇಶವ್ಯಾಪಿ ಮುಷ್ಕರ:

ಫೆಬ್ರವರಿ 12ರಂದು ರಾಜ್ಯದಲ್ಲಿ ಕೇಂದ್ರ ಮತ್ತು ಸ್ವತಂತ್ರ ಕಾರ್ಮಿಕ ಸಂಘಗಳು ಎಲ್ಲಾ ರೈತ ಸಂಘಗಳು, ಕೂಲಿಕಾರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು ಮತ್ತು ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿ ಮುಷ್ಕರ ನಡೆಸುತ್ತಿದ್ದು, ದೇಶವ್ಯಾಪಿಯ ಮುಷ್ಕರ ಬೆಂಬಲಿಸಿ ಜನತೆ ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸುವುದು ಅಗತ್ಯ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಆರ್.ಚಂದ್ರತೇಜಸ್ವಿ, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವ್ ನಾಯಕ್, ಪ್ರಜಾ ವಿಮೋಚನಾ ಚಳುವಳಿ ಮುಖಂಡ ಗೂಳ್ಯ ಹನುಮಣ್ಣ, ಸಿಐಟಿಯು ಜಿಲ್ಲಾ ಖಜಾಂಚಿ ಎಚ್‌.ಎನ್.ಮೋಹನ್ ಬಾಬು, ಕೆಐಇಇಎಫ್ ಕಾರ್ಮಿಕ ಸಂಘದ ಮುಖಂಡ ಪ್ರಭಾಕರ್ ಎಂ.ಜೆ, ಶಿವಕುಮಾರ್ .ಹೆಚ್, ಎಐಟಿಯುಸಿ ಮುಖಂಡ ಒಟ್ಟು ಬಿಲ್ಜ್, ಮಂಜುನಾಥ್ ಎನ್, ಓಮಿನಿ, ಎಚ್.ಎಲ್ ಹೇಮಂತ್ ಕುಮಾರ್, ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್, ಕರ್ನಾಟಕ ರಾಜ್ಯ ರೈತ ಸಂಘದ ಮುತ್ತೇಗೌಡ, ನಾರಾಯಣಪ್ಪ,ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಂಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ ) ಹಮಾಮ್‌ ವೆಂಕಟೇಶ್, ಬಿರ್ಲಾ ಸೂಪರ್ ಕಾರ್ಮಿಕ ಸಂಘದ ಮುಖಂಡ ರೇಣುಕಾರಾಧ್ಯ, ಅನಿಲ್ ಗುಪ್ತ, ಬೀರೇಂದ್ರ ಗುಪ್ತ, ಎಆರ್‌ಡಿಯು ಆಟೋ ಚಾಲಕರ ಸಂಘದ ಅಧ್ಯಕ್ಷ ಸಾದಿಕ್ ಪಾಷಾ, ಶಿವರಾಜ್ ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಮಹದೇವಯ್ಯ, ಡಿಎಸ್ಎಸ್ ಸಂಚಾಲಕರಾದ ಸುರೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಸಿ ಎಚ್ ರಾಮಕೃಷ್ಣಯ್ಯ, ಸದಾಶಿವಪ್ಪ, ಇಂಡೇನಾ ಇಂಡಿಯಾ ಕಾರ್ಮಿಕ ಸಂಘದ ವಿನಯ್ ಹಾಜರಿದ್ದರು.

6ಕೆಡಿಬಿಪಿ2-

ದೊಡ್ಡಬಳ್ಳಾಪುರದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸಂಯುಕ್ತ ಹೋರಾಟ- ಕರ್ನಾಟಕ ದಿಂದ ಪತ್ರಿಕಾಗೋಷ್ಠಿ ನಡೆಯಿತು.