ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಬೆಳಿಗ್ಗೆ 5ರಿಂದ 7 ಗಂಟೆ ಹಾಗೂ ಸಂಜೆ 5ರಿಂದ 7 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಸಂಚರಿಸಬಾರದು ಎಂದು ಸೂಚನೆ ನೀಡಲಾಗಿದೆ. ಈ ಸಮಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ನಿರಂತರ ಗಸ್ತು ಹಾಗೂ ಕಣ್ಗಾವಲು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಆನೆಗಳ ಸಂಖ್ಯೆ 6,395 ಹಾಗೂ ಹುಲಿಗಳ ಸಂಖ್ಯೆ 563ಕ್ಕೆ ಏರಿಕೆಯಾಗಿದೆ. ಅರಣ್ಯ ಪ್ರದೇಶಗಳು ಕುಂಠಿತವಾಗುತ್ತಿರುವ ಹಿನ್ನೆಲೆಯಲ್ಲಿ ಆನೆಗಳು ಕೃಷಿ ಜಮೀನುಗಳಿಗೆ ನುಗ್ಗುತ್ತಿವೆ. ಈ ಸಮಸ್ಯೆ ತಗ್ಗಿಸಲು ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ 10 ದಿನಗಳಲ್ಲಿ ಹೊಸ ಆನೆ ಶಿಬಿರ ಆರಂಭಿಸಲಾಗುವುದು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಮಾನವ-ಆನೆ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ಜನರ ಜೀವ ಹಾಗೂ ರೈತರ ಬೆಳೆ ರಕ್ಷಣೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಬೆಳಿಗ್ಗೆ 5ರಿಂದ 7 ಗಂಟೆ ಹಾಗೂ ಸಂಜೆ 5ರಿಂದ 7 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಸಂಚರಿಸಬಾರದು ಎಂದು ಸೂಚನೆ ನೀಡಲಾಗಿದೆ. ಈ ಸಮಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ನಿರಂತರ ಗಸ್ತು ಹಾಗೂ ಕಣ್ಗಾವಲು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಆನೆಗಳ ಸಂಖ್ಯೆ 6,395 ಹಾಗೂ ಹುಲಿಗಳ ಸಂಖ್ಯೆ 563ಕ್ಕೆ ಏರಿಕೆಯಾಗಿದೆ. ಅರಣ್ಯ ಪ್ರದೇಶಗಳು ಕುಂಠಿತವಾಗುತ್ತಿರುವ ಹಿನ್ನೆಲೆಯಲ್ಲಿ ಆನೆಗಳು ಕೃಷಿ ಜಮೀನುಗಳಿಗೆ ನುಗ್ಗುತ್ತಿವೆ. ಈ ಸಮಸ್ಯೆ ತಗ್ಗಿಸಲು ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ 10 ದಿನಗಳಲ್ಲಿ ಹೊಸ ಆನೆ ಶಿಬಿರ ಆರಂಭಿಸಲಾಗುವುದು ಎಂದು ಹೇಳಿದರು.ಸುಮಾರು 20 ರಿಂದ 22 ಆನೆಗಳನ್ನು ಗೋವಾ-ಮಹಾರಾಷ್ಟ್ರ ಗಡಿಭಾಗದ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸುವ ಯೋಜನೆ ಇದೆ. ಸರ್ಕಾರ ರೈಲ್ವೆ ಬ್ಯಾರಿಕೇಡ್, ಆನೆ ತಡೆ ಕಂದಕ ನಿರ್ಮಾಣ ಸೇರಿದಂತೆ ಹಲವು ಶಾಶ್ವತ ಕ್ರಮಗಳನ್ನು ಕೈಗೊಂಡಿದೆ. ಡ್ರೋನ್ ಕ್ಯಾಮೆರಾ, ಥರ್ಮಲ್ ಇಮೇಜಿಂಗ್ ತಂತ್ರಜ್ಞಾನ ಬಳಸಿ ಆನೆಗಳ ಚಲನವಲನಗಳ ಮೇಲೆ ನಿಗಾ ಇಡಲಾಗುತ್ತಿದೆ. ಜೊತೆಗೆ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಹಾಗೂ ಆಂಟಿ-ಡಿಪ್ರೆಡೇಶನ್ ಕ್ಯಾಂಪ್‌ಗಳನ್ನು ಸ್ಥಾಪಿಸಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.ರೈತರ ಬೆಳೆ ಹಾನಿಗೆ ಸಕಾಲದಲ್ಲಿ ಪರಿಹಾರ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ರಾಜ್ಯಾದ್ಯಂತ ₹60 ಕೋಟಿ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷದ ಎಲ್ಲಾ ಬಾಕಿ ಪರಿಹಾರವನ್ನು ವಿತರಿಸಲಾಗಿದ್ದು, ರೈತರು ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ಈಗ ಇಲ್ಲ. ಮಾನವ ಜೀವ ರಕ್ಷಣೆ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಪರಿಸರ ಸಂರಕ್ಷಣೆಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಪರಿಸರ ಪ್ರೇಮಿಗಳ ಸೇವೆಯನ್ನು ಸ್ಮರಿಸಿ, ಅವರ ಸ್ಮರಣಾರ್ಥ 25 ಎಕರೆ ಭೂಮಿಯನ್ನು ಮೀಸಲಿಟ್ಟು ₹25 ಕೋಟಿ ವೆಚ್ಚದ ಸ್ಮಾರಕ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.