ಸೌಲಭ್ಯ ಕಲ್ಪಿಸುವುದೇ ಸ್ವಚ್ಛತಾ ಅಭಿಯಾನದ ಉದ್ದೇಶ

| Published : Sep 30 2024, 01:17 AM IST

ಸೌಲಭ್ಯ ಕಲ್ಪಿಸುವುದೇ ಸ್ವಚ್ಛತಾ ಅಭಿಯಾನದ ಉದ್ದೇಶ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಚ್ಛ ಭಾರತ ಅಭಿಯಾನದ ಪ್ರಮುಖ ಉದ್ದೇಶವೆಂದರೆ, ಶೌಚಾಲಯಗಳು, ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳು ಗ್ರಾಮ ಸ್ವಚ್ಛತೆ ಮತ್ತು ಪ್ರತಿ ವ್ಯಕ್ತಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿವ ನೀರು ಪೂರೈಕೆಯಂತಹ ಮೂಲಭೂತ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ

ಕನ್ನಡಪ್ರಭ ವಾರ್ತೆ ಕೆಜಿಎಫ್ಮಹಾತ್ಮ ಗಾಂಧೀಜಿ ಜನ್ಮದಿನದ ಅಂಗವಾಗಿ ಅಕ್ಟೋಬರ್‌ ೨ರಂದು ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯಗಳ ಸಂಕೀರ್ಣದಲ್ಲಿ ಸ್ವಚ್ಛತೆಯೇ ಸೇವೆ ಹಮ್ಮಿಕೊಂಡಿದೆ ಎಂದು ೩ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.ನಗರಸಭೆ, ಕೆಜಿಎಫ್ ವಕೀಲರ ಸಂಘ, ಕೆಜಿಎಫ್‌ನ ತಾಲೂಕು ಕಾನೂನು ಪ್ರಾಧಿಕಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮೂಲಭೂತ ಸೌಲಭ್ಯ ಕಲ್ಪಿಸಬೇಕು

ಸ್ವಚ್ಛ ಭಾರತ ಅಭಿಯಾನದ ಪ್ರಮುಖ ಉದ್ದೇಶವೆಂದರೆ, ಶೌಚಾಲಯಗಳು, ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳು ಗ್ರಾಮ ಸ್ವಚ್ಛತೆ ಮತ್ತು ಪ್ರತಿ ವ್ಯಕ್ತಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿವ ನೀರು ಪೂರೈಕೆಯಂತಹ ಮೂಲಭೂತ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಸ್ವಚ್ಛ ಭಾರತ ಅಭಿಯಾನವು ಭಾರತದ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಮತ್ತು ಮಹತ್ವದ ಮಿಷನ್‌ಗಳಲ್ಲಿ ಒಂದಾಗಿದೆ, ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಿಚಯಿಸಿದರು, ಅ.೨ ರಂದು ಮಹಾತ್ಮ ಗಾಂಧಿಯವರ ಸ್ವಚ್ಛ ದೇಶವನ್ನು ಗೌರವಿಸಲು ಈ ದಿನದ ಕಾರ್ಯಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಸ್ವಚ್ಛತೆಗೆ ಒತ್ತು ನೀಡಿದ್ದ ಗಾಂಧೀಜಿ

ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ ಮಾತನಾಡಿ, ಸ್ವಚ್ಛತೆಯನ್ನು ಸೇವೆ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದರು, ಅವರ ಜನ್ಮದಿನವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ ಆರಂಭಿಸಿ, ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು,

ಅಭಿಯಾನದಡಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಕಸದ ಬ್ಲಾಕ್ ಸ್ಟಾಟ್‌ಗಳನ್ನು ಗುರುತಿಸಿ ಸ್ವಚ್ಛ ಮಾಡಬೇಕಿದ್ದು, ಅಭಿಯಾನದಲ್ಲಿ ಶಾಲಾ ಮಕ್ಕಳನ್ನು ಸಹ ಒಳಗೊಂಡು ಅವರಲ್ಲಿ ಈಗಿನಿಂದಲೇ ಸ್ವಚ್ಛತೆಯ ಪ್ರಜ್ಞೆಯನ್ನು ಮೂಡಿಸುವ ಅವಶ್ಯವಿದ್ದು, ಶಾಲಾ ಮಟ್ಟದಲ್ಲಿ ಸ್ವಚ್ಛತೆಯ ಸಾಮೂಹಿಕ ಪ್ರತಿಜ್ಞಾ ವಿದಿಯನ್ನು ಬೋಧಸಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಪೌರಕಾರ್ಮಿಕರು, ನ್ಯಾಯಾಲಯದ ಸಿಬ್ಬಂದಿಗಳು ನ್ಯಾಯಾಲಯಗಳ ಸಂಕೀರ್ಣವನ್ನು ಸ್ವಚ್ಛಗೊಳಿಸಿದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುಜಫರ್ ಎ ಮಾಂಜರಿ, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಎಂ. ನಾಧಫ್, ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರಾದ ವಿನೋದ್‌ಕುಮಾರ್.ಎಂ. ೧ ನೇ ಅಡಿಷ್ನಲ್ ಸಿವಿಲ್ ನ್ಯಾಯಾಧೀಶರಾದ ಶ್ರಮತಿ ಶಮಿದಾ.ಕೆ, ೨ ನೇ ಅಡಿಷ್ನಲ್ ಸಿವಿಲ್ ನ್ಯಾಯಾಧೀಶರಾದ ಮಂಜು.ಎಂ. ವಕೀಲರ ಸಂಘದ ಉಪಾಧ್ಯಕ್ಷರಾದ ಮಣಿವಣ್ಣನ್ ಇದ್ದರು.