ಸರ್ವಜ್ಞ ಎಂದರೆ ಎಲ್ಲ ವಿಷಯಗಳನ್ನು ಬಲ್ಲವ ಎಂದರ್ಥ. ಸರ್ವಜ್ಞ ಕವಿ ಮೂರು ಸಾಲಿನಲ್ಲಿ ಮಹಾಕಾವ್ಯಗಳ, ಮಹಾಗ್ರಂಥಗಳ ಸಾರವನ್ನು ಹಿಡಿದಿಟ್ಟಿದ್ದಾರೆ. ತುಳಸಿದಾಸರು ಹೇಳುವಂತೆ ಗಾಗರ್ವೆ ಸಾಗರ ಅಂದರೆ ಕೊಡದಲ್ಲಿ ಸಾಗರ ತುಂಬಿಸುವಂತೆ ೩ ಸಾಲಿನ ಪದ್ಯದಲ್ಲಿ ಸರ್ವಜ್ಞ ಮಹಾಕವಿ ಜಗತ್ತಿನ ಜ್ಞಾನ, ವೈಚಾರಿಕತೆ, ಮಾನವೀಯ ಮೌಲ್ಯ ತುಂಬಿಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ದೇವನಹಳ್ಳಿ

ಜಾತಿ, ಮತ, ಧರ್ಮ ಸಂಘರ್ಷ ವಿರುದ್ಧ ಕಿಡಿಕಾರಿದ, ಮೂಢನಂಬಿಕೆ, ಶೋಷಣೆಗಳನ್ನು ಕಟುವಾಗಿ ಟೀಕಿಸಿದ, ವಿಶ್ವ ಮಾನವತೆ, ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಸರ್ವಜ್ಞನ ತ್ರಿಪದಿಗಳು ಸಮಾಜಕ್ಕೆ ಸಾರ್ವಕಾಲಿಕ ದಾರಿದೀಪ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎನ್. ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ಪರ್ವತಪುರ ರಸ್ತೆಯಲ್ಲಿರುವ ಬನಶಂಕರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ವಚನಕಾರ ಸರ್ವಜ್ಞ ಜಯಂತಿಯಲ್ಲಿ ಮಾತನಾಡಿ, ಸರ್ವಜ್ಞ ಎಂದರೆ ಎಲ್ಲ ವಿಷಯಗಳನ್ನು ಬಲ್ಲವ ಎಂದರ್ಥ. ಸರ್ವಜ್ಞ ಕವಿ ಮೂರು ಸಾಲಿನಲ್ಲಿ ಮಹಾಕಾವ್ಯಗಳ, ಮಹಾಗ್ರಂಥಗಳ ಸಾರವನ್ನು ಹಿಡಿದಿಟ್ಟಿದ್ದಾರೆ. ತುಳಸಿದಾಸರು ಹೇಳುವಂತೆ ಗಾಗರ್ವೆ ಸಾಗರ ಅಂದರೆ ಕೊಡದಲ್ಲಿ ಸಾಗರ ತುಂಬಿಸುವಂತೆ ೩ ಸಾಲಿನ ಪದ್ಯದಲ್ಲಿ ಸರ್ವಜ್ಞ ಮಹಾಕವಿ ಜಗತ್ತಿನ ಜ್ಞಾನ, ವೈಚಾರಿಕತೆ, ಮಾನವೀಯ ಮೌಲ್ಯ ತುಂಬಿಟ್ಟಿದ್ದಾರೆ ಎಂದು ಹೇಳಿದರು.

ಸಾಹಿತಿ ಶರಣಯ್ಯ ಹಿರೇಮಠ, ಕಸಾಪ ಗೌರವ ಕಾರ್ಯದರ್ಶಿ ದೇವರಾಜ್ ಸಿ.ಪಿ.ಎನ್. ರೆಡ್ಡಿ, ಪ್ರಭು ಆಚಾರ್, ಬನಶಕರಿ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ವೆಂಕಟೇಶ್, ಶಿವಕುಮಾರ್, ಪ್ರಾಂಶುಪಾಲ ಶಿವರಾಮ್, ಉಪನ್ಯಾಸಕ ಶಿವಕುಮಾರ್, ಶಿಕ್ಷಕರು ವಿದ್ಯಾರ್ಥಿಗಳು ಇದ್ದರು. ----------------

ದೇವನಹಳ್ಳಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ಭನಶಂಕರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಚನಕಾರ ಸರ್ವಜ್ಞರ ಜಯಂತಿ ಆಚರಿಸಲಾಯಿತು.