ಕನ್ನಡಪ್ರಭ ವಾರ್ತೆ ಮಹಾಲಿಂಗಪುರಪಟ್ಟಣದ ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಹೆಸರಿನಲ್ಲಿದ್ದ ವೃತ್ತವನ್ನು ತೆರವುಗೊಳಿಸಿರುವ ಪುರಸಭೆಯ ಕ್ರಮವನ್ನು ತೀವ್ರವಾಗಿ ಖಂಡಿಸಿ, ನಾಗರಿಕರು ಮತ್ತು ಹೋರಾಟಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ 6ನೇ ದಿನಕ್ಕೆ ಕಾಲಿಟ್ಟಿದೆ.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಪಟ್ಟಣದ ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಹೆಸರಿನಲ್ಲಿದ್ದ ವೃತ್ತವನ್ನು ತೆರವುಗೊಳಿಸಿರುವ ಪುರಸಭೆಯ ಕ್ರಮವನ್ನು ತೀವ್ರವಾಗಿ ಖಂಡಿಸಿ, ನಾಗರಿಕರು ಮತ್ತು ಹೋರಾಟಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ 6ನೇ ದಿನಕ್ಕೆ ಕಾಲಿಟ್ಟಿದೆ.ಹೋರಾಟದ ಹಿನ್ನೆಲೆ: ವೃತ್ತವನ್ನು ತೆರವುಗೊಳಿಸಿದ್ದು, ಈ ನಿರ್ಧಾರವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಭಾವನೆಗಳಿಗೆ ಧಕ್ಕೆ ತಂದಿರುವ ಈ ಬೆಳವಣಿಗೆಯ ವಿರುದ್ಧ ಸ್ಥಳೀಯರು ಕಳೆದ 6 ದಿನಗಳಿಂದ ಪುರಸಭೆಯ ಆವರಣದಲ್ಲಿ ಮಂಡಿಯೂರಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ವೃತ್ತವನ್ನು ತೆರವುಗೊಳಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.ಮುಂದುವರಿದ ಹೋರಾಟ: ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಸಮಾಜದ ನಾಗರಿಕರು, ಪುರಸಭೆಯ ಮುಂಭಾಗದಲ್ಲಿ ಧರಣಿ ಕುಳಿತು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. 6ನೇ ದಿನವಾದ ಬುಧವಾರ ಕೂಡ ಪ್ರತಿಭಟನಾಕಾರರು ತಮ್ಮ ಪಟ್ಟು ಸಡಿಲಿಸಿಲ್ಲ. ಎಲ್ಲಿಯವರೆಗೆ ವೃತ್ತದ ವಿಚಾರದಲ್ಲಿ ನ್ಯಾಯ ಸಿಗುವುದಿಲ್ಲವೋ ಅಲ್ಲಿಯವರೆಗೆ ಧರಣಿ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.