ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತನೀರಾವರಿ ಹೋರಾಟ ಸಮಿತಿ ವತಿಯಿಂದ ವಡಕೆಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 80ನೇ ದಿನಕ್ಕೆ ಕಾಲಿಟ್ಟಿದೆ.

ಕನ್ನಡಪ್ರಭ ವಾರ್ತೆ, ಹನೂರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತನೀರಾವರಿ ಹೋರಾಟ ಸಮಿತಿ ವತಿಯಿಂದ ವಡಕೆಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 80ನೇ ದಿನಕ್ಕೆ ಕಾಲಿಟ್ಟಿದೆ.

ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಇನ್ನುಳಿದ ಸಮಸ್ಯೆಗಳನ್ನು ಬಗೆಹರಿಸುವಂತೆ ರೈತರು, ಮಹಿಳೆಯರು , ಮಕ್ಕಳು,ಅಹೋರಾತ್ರಿ ಧರಣಿ ನಡೆಸುತ್ತಿದ್ದು 80 ದಿನ ಕಳೆದರೂ ಈ ಭಾಗದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಮತ್ತು ಸರ್ಕಾರ ವಿಫಲವಾಗಿವೆ ಎಂದು ಧರಣಿ ನಿರತರು ಆರೋಪಿಸಿ ಜೀವ ಜಲ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿರುವ ಬಗ್ಗೆ ಕಳೆದ 80 ದಿನಗಳಿಂದ ನಡೆಯುತ್ತಿರುವ ಧರಣಿ ನಿರತ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ .

ಧರಣಿಯಲ್ಲಿ ಆರ್ ಅರ್ಪುದರಾಜ್, ಸೆಲ್ವ ರಾಜ್,ಸೂಸೈರಾಜ್, ಸವರಿ, ಫ್ರಾನ್ಸಿಸ್, ಇಸಾಕ್, ಲೂರ್ದುಸ್ವಾಮಿ, ಪೀಟರ್ ಸೇಸುರಾಜ್ ಇಮ್ಮನ್ ವೆಲ್ ಡೇವಿಡ್ ಹಿರಿಯ ನಾಯಕ ಡಾಲಿ ಷಣ್ಮುಗಂ ಚಿನ್ನ ದೊರೆ ಜೋಸೆಫ್ ಇನ್ನಿತರ ರೈತ ಮುಖಂಡರು ಉಪಸ್ಥಿತರಿದ್ದರು.