ಕತ್ತಿಗಿಂತ ಲೇಖನಿ ತುಂಬಾ ಹರಿತ: ಡಾ.ಪ್ರಕಾಶ್

| Published : Jan 05 2025, 01:35 AM IST

ಕತ್ತಿಗಿಂತ ಲೇಖನಿ ತುಂಬಾ ಹರಿತ: ಡಾ.ಪ್ರಕಾಶ್
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಿನದರ್ಶಿಕೆಯನ್ನು ತಹಸೀಲ್ದಾರ್‌ ಗುರುಪ್ರಸಾದ್ ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಹನೂರು

ದೈನಂದಿನ ಬದುಕಿನಲ್ಲಿ ಕ್ಯಾಲೆಂಡರ್ ಮತ್ತು ಡೈರಿಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಹೇಳಿದರು.ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಲಿಂಡರ್‌ ಬಿಡುಗಡೆ ಮಾಡಿ ಮಾತನಾಡಿದರು. ಮನುಷ್ಯನ ಜೀವನದಲ್ಲಿ ದಿನಚರಿಗಳು ನಮ್ಮ ಗುರಿ ಮತ್ತು ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಅತ್ಯಂತ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಈ ಕ್ಯಾಲೆಂಡರ್ ಬಿಡುಗಡೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಅತ್ಯಂತ ಕಷ್ಟದ ಹಾದಿಯಲ್ಲೂ ಸಮಾಜದ ಅಂಕು-ಡೊಂಕು ತಿದ್ದುವ ಕೆಲಸ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ಪತ್ರಕರ್ತರು ತಮಗೆ ಪಟ್ಟಣ ವ್ಯಾಪ್ತಿಯಲ್ಲಿ ನಿವೇಶನಬೇಕೆಂದು ಮನವಿ ಪತ್ರ ನೀಡಿದ್ದೀರಿ. ಖಂಡಿತ ನನ್ನ ವ್ಯಾಪ್ತಿಯ ಒಳಗೆ ನನ್ನ ಕೈಲಾದಷ್ಟು ಕೆಲಸವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಮುಂದಿನ ಕೆಲಸ ಮಾಡಲು ಮುಂದಾಗುತ್ತೇನೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ಕತ್ತಿಗಿಂತ ಲೇಖನಿ ತುಂಬಾ ಹರಿತವಾಗಿದೆ. ಅದರ ಮೂಲಕ ಸಮಾಜದಲ್ಲಿ ತಮ್ಮ ಜವಾಬ್ದಾರಿ ಅರಿತು ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ನಮ್ಮ ತಾಲೂಕಿನ ಪತ್ರಕರ್ತರು ಮಾಡುತ್ತಿದ್ದಾರೆ. ಅವರ ಬದುಕು ಅತ್ಯಂತ ಕಡು ಬಡತನದಿಂದ ಸಾಗುತ್ತಿದೆ ಇಂತಹ ಸಂದರ್ಭದಲ್ಲೂ ಸಹ ಬಹಳಷ್ಟು ಸುದ್ದಿಗಳನ್ನು ನಿಷ್ಪಕ್ಷಪಾತವಾಗಿ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅತ್ಯಂತ ಕಷ್ಟದಲ್ಲಿ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಜೊತೆಗೆ ನಾವು ತಾಲೂಕಿನ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ಹರೀಶ್, ಸೋಮಶೇಖರ್, ಸುದೇಶ್, ಬಸವರಾಜ್, ತಾಲೂಕು ಸಾರ್ವಜನಿಕ ಹಿತರಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನೋದ್, ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜು ನಾಯ್ದು, ಅಧ್ಯಕ್ಷ ಮಹಾದೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಸವರಾಜು, ಜಿಲ್ಲಾ ನಿರ್ದೇಶಕರಾದ ಸುರೇಶ್ ಅಜ್ಜೀಪುರ, ಪ್ರಭುಸ್ವಾಮಿ, ಸಹ ಕಾರ್ಯದರ್ಶಿ ಗೋವಿಂದ ಖಜಾಂಚಿ ಮಹದೇವಸ್ವಾಮಿ, ನಿರ್ದೇಶಕರಾದ ಮಧು ಸೋಮಶೇಖರ್, ಭರತ್ ಸದಸ್ಯರಾದ ಲಿಂಗರಾಜು, ಅಭಿಲಾಶ್, ಶಿವಕುಮಾರ್, ಮಹಾದೇವಸ್ವಾಮಿ ಜಿ, ಲಿಂಗರಾಜು, ಮಹಾದೇವ, ಶಾಗ್ಯ ನಂದೀಶ್, ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.