ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್

| Published : Jun 06 2024, 12:31 AM IST

ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.

- ತರೀಕೆರೆಯಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷದಿಂದ ವಿಜಯೋತ್ಸವ

ಕನ್ನಡಪ್ರಭ ವಾರ್ತೆ, ತರೀಕೆರೆ

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.ಬುಧವಾರ ಭಾರತೀಯ ಜನತಾ ಪಾರ್ಟಿ ಮತ್ತು ಮೈತ್ರಿ ಪಕ್ಷದಿಂದ ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದ ಬಳಿ ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಡಳಿತ ಒಂದೇ ವರ್ಷದಲ್ಲಿ ವಿಫಲವಾಗಿದೆ. ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹಣವನ್ನು ತೆಲಂಗಾಣಕ್ಕೆ ಕಳಿಸಲಾಗಿದೆ. ಸಚಿವ ನಾಗೇಂದ್ರರನ್ನು ಉಚ್ಚಾಟಿಸಬೇಕು ಎಂದು ಆಗ್ರಹ ಪಡಿಸಿದರು.

ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಬ್ರಷ್ಠಾಚಾರ ನಡೆಯುತ್ತಿದೆ, ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷ ಒಡಗೂಡಿ ಬ್ರಷ್ಠಾಚಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗೆ ಮತ ನೀಡಿದ ಮತದಾರರಿಗೆ, ಶ್ರಮಿಸಿದ ಪಕ್ಷದ ಕರ್ತರು ಮತ್ತು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ ದೇಶದಲ್ಲಿ ಎನ್ ಡಿಎ ಹೆಚ್ಚು ಸ್ಥಾನ ಗಳಿಸಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದು ವಿಜಯೋತ್ಸವ ಆಚರಿಸಲಾಗುತ್ತಿದೆ. ದೇಶ ಹತ್ತು ವರ್ಷದಲ್ಲಿ ಹೆಚ್ಚು ಅಭಿವೃದ್ಧಿಯಾಗಿದೆ. ಕೋಟಾ ಶ್ರೀನಿವಾಸ ಪೂಜಾರಿಗೆ ಮತ ನೀಡಿದವರು, ಶ್ರಮಿಸಿದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ನರೇಂದ್ರ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಭದ್ರ ಭಾರತ ನಿರ್ಮಿಸಿದ್ದಾರೆ. ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುವ ಅವರಿಗೆ ಅಭಿನಂದನೆಗಳು. ತಾಲೂಕಿನಲ್ಲಿ ರೈತರಿಗೆ, ಕಾರ್ಮಿಕರಿಗೆ ಸೌಲಭ್ಯ ವಂಚಿತರಿಗೆ ಸೌಲಭ್ಯತಲುಪಿಸಬೇಕು.ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಿಂದ ಹೋರಾಟ ಮಾಡಿ ಜನತೆಗೆ ನ್ಯಾಯ ದೊರಕಿಸಿದರೆ ಮುಂದಿನ ಚುನಾವಣೆಗಳಲ್ಲಿ ಫಲಿತಾಂಶ ನಮ್ಮದೇ ಆಗಿರುತ್ತದೆ ಎಂದು ಹೇಳಿದರು.ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿರುವುದು ಎಲ್ಲರಿಗೂ ಖುಷಿ ತಂದಿದೆ ಎಂದು ತಿಳಿಸಿದರು. ಬಿಜೆಪಿ ತಾಲೂಕ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ದೃವಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಶಂಭೈನೂರು ಆನಂದಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಟಿ.ಎಲ್.ರಮೇಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ರಾಜಶೇಖರ್, ರಾಜಶೇಖರ್, ಶಿವಶಂಕರ್, ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5ಕೆಟಿಆರ್.ಕೆ.4ಃ

ತರೀಕೆರೆಯಲ್ಲಿ ಬಿಜೆಪಿಮತ್ತು ಮೈತ್ರಿ ಪಕ್ಷದಿಂದ ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು. ಜೆಡಿಎಸ್ತಾ ಲೂಕು ಅಧ್ಯಕ್ಷ ಎಂ.ನರೇಂದ್ರ ಮತ್ತಿತರರು ಇದ್ದರು.