21, 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ

| Published : Jul 02 2025, 12:25 AM IST

21, 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ
Share this Article
  • FB
  • TW
  • Linkdin
  • Email

ಸಾರಾಂಶ

ಕವಲು ದಾರಿಯಲ್ಲಿ ಸಾಗಿರುವ ವೀರಶೈವ ಲಿಂಗಾಯತ ಧರ್ಮವನ್ನು ಒಗ್ಗೂಡಿಸುವ ಉದ್ದೇಶದಿಂದ ನಾಲ್ಕು ದಶಕದ ನಂತರ ದಾವಣಗೆರೆಯಲ್ಲಿ ಜು.21 ಮತ್ತು 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

- 4 ದಶಕಗಳ ನಂತರ ಬೃಹತ್‌ ಸಮ್ಮೇಳನ: ರಂಭಾಪುರಿ ಶ್ರೀ । ವೀರಶೈವ ಲಿಂಗಾಯತ ಧರ್ಮ ಒಗ್ಗೂಡಿಸುವ ಉದ್ದೇಶ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕವಲು ದಾರಿಯಲ್ಲಿ ಸಾಗಿರುವ ವೀರಶೈವ ಲಿಂಗಾಯತ ಧರ್ಮವನ್ನು ಒಗ್ಗೂಡಿಸುವ ಉದ್ದೇಶದಿಂದ ನಾಲ್ಕು ದಶಕದ ನಂತರ ದಾವಣಗೆರೆಯಲ್ಲಿ ಜು.21 ಮತ್ತು 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ನಗರದ ಶ್ರೀಶೈಲ ಮಠದಲ್ಲಿ ಮಂಗಳವಾರ ಪಂಚಪೀಠಾಧೀಶರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಶೃಂಗ ಸಮ್ಮೇಳನ ನಡೆಯಲಿದೆ. ಪಂಚಪೀಠಗಳ ಜಗದ್ಗುರುಗಳು, ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ, ಮಧ್ಯಪ್ರದೇಶ, ಉತ್ತರಾಂಚಲ ಸೇರಿದಂತೆ ವಿವಿಧ ರಾಜ್ಯಗಳ ವೀರಶೈವ ಧರ್ಮ ಪರಂಪರೆಯ ಎಲ್ಲ ಮಠಾಧೀಶರು ಪಾಲ್ಗೊಳ್ಳುವರು ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಸಮಾಜದ ಹಿರಿಯರಾದ ಡಾ.ಶಾಮನೂರು ಶಿವಶಂಕರಪ್ಪ ಸಮ್ಮೇಳನ ಉದ್ಘಾಟಿಸುವರು. ಮಹಾಸಭಾ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಆಶಯ ನುಡಿಗಳನ್ನಾಡುವರು. ಸಮ್ಮೇಳನಕ್ಕೆ ಇನ್ನೂ ಯಾರನ್ನೆಲ್ಲಾ ಆಹ್ವಾನಿಸಬೇಕೆಂಬ ಬಗ್ಗೆ ಚರ್ಚೆ ಸಾಗಿವೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ 40 ವರ್ಷದ ಹಿಂದೆ ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಬೃಹತ್ ಸಮ್ಮೇಳನ ನಡೆದಿತ್ತು. ಅದಾದ ನಂತರ ಇದೇ ತಿಂಗಳಲ್ಲಿ ಮತ್ತೆ ನಡೆಯುತ್ತಿದೆ ಎಂದು ಹೇಳಿದರು.

ಉಜ್ಜಯಿನಿ ಪೀಠದ ಡಾ.ಸಿದ್ದಲಿಂಗ ಮಹಾಸ್ವಾಮೀಜಿ, ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಭಗವತ್ಪಾದರು, ಕಾಶೀ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಸ್ವಾಮೀಜಿ ಸೇರಿದಂತೆ ವಿವಿಧ ಶ್ರೀಗಳು, ಸಮಾಜದ ಮುಖಂಡರು ಇದ್ದರು.

- - -

-1ಕೆಡಿವಿಜಿ17: ಸುದ್ದಿಗೋಷ್ಠಿಯಲ್ಲಿ ರಂಭಾಪುರಿ ಶ್ರೀ ಮಾತನಾಡಿದರು. ಶ್ರೀಶೈಲ, ಉಜ್ಜಯಿನಿ ಪೀಠ, ಕಾಶೀ ಪೀಠದ ಶ್ರೀಗಳು ಇದ್ದರು.