ಶಿರಹಟ್ಟಿ: ದೇವರ ದಾಸಿಮಯ್ಯನವರು ೧೧ನೇ ಶತಮಾನದ ನೇಕಾರ ಸಂತ. ಅವರು ಮೇಲ್ವರ್ಗ ಹಾಗೂ ಕೆಳವರ್ಗವೆಂಬ ಭೇದವಿಲ್ಲದೇ ವಚನಗಳ ಮೂಲಕ ಸಮಾನತೆ ಮೂಡಿಸಲು ಪ್ರಯತ್ನಿಸಿದರು. ಅವರ ವಚನಗಳನ್ನು ಓದುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕು ಎಂದು ಗ್ರೇಡ್- ೨ ತಹಸೀಲ್ದಾರ್ ವಿ.ಎ. ಮುಳಗುಂದಮಠ ತಿಳಿಸಿದರು.ತಾಲೂಕು ಆಡಳಿತದ ವತಿಯಿಂದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ದೇವರ ದಾಸಿಮಯ್ಯ ಸಮಾಜದಲ್ಲಿ ತುಳಿತಕ್ಕೊಳಗಾದವರಲ್ಲಿ ಜಾಗೃತಿ ಮೂಡಿಸಲು ಸಾವಿರಾರು ವಚನಗಳನ್ನು ರಚಿಸಿದ ಅವರು ವಚನ ಸಾಹಿತ್ಯದ ಆದ್ಯ ಪ್ರವರ್ತಕರು ಎಂದು ಬಣ್ಣಿಸಿದರು.ವಚನಕಾರರಾದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಅವರು ವಚನಗಳನ್ನು ರಚಿಸುವ ಮೊದಲೇ ದೇವರ ದಾಸಿಮಯ್ಯ ವಚನಗಳನ್ನು ರಚಿಸಿ ಮೊದಲ ವಚನಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಸ್ಮರಿಸಿದರು. ದಾಸಿಮಯ್ಯ ಅವರು ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅರಿವು ಮತ್ತು ಆಚಾರಗಳ ಮೂರ್ತರೂಪದಂತಿರುವ ದೇವರ ದಾಸಿಮಯ್ಯನವರ ವಚನಗಳು ಸಾರ್ವಕಾಲಿಕ ಎಂದರು.ದೇವರ ದಾಸಿಮಯ್ಯರ ವಚನಗಳು ಸಮಾಜಕ್ಕೆ ಮತ್ತು ಸಮುದಾಯಕ್ಕೆ ಅಪಾರ ಕೊಡುಗೆ ನೀಡಿವೆ. ಸಾಮಾಜಿಕ ನ್ಯಾಯ ಪ್ರತಿಪಾದಿಸುವ ವಚನ ಸಾಹಿತ್ಯವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಜತೆಗೆ ವಚನಕಾರರ ಆದರ್ಶ ಮತ್ತು ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು. ದಾಸಿಮಯ್ಯರ ಆಶಯ, ಚಿಂತನೆ ಮತ್ತು ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.ಶಿರಸ್ತೇದಾರ ಗಿರಿಜಾ ಪೂಜಾರ, ಎಚ್.ಜೆ. ಭಾವಿಕಟ್ಟಿ, ಸಂತೋಷ ಅಸ್ಕಿ, ವಿನೋದ ಪಾಟೀಲ, ರಾಧಾ ದೇಸಾಯಪಟ್ಟಿ, ಬಿ.ಎಸ್. ಕುರಡಗಿ ಸೇರಿದಂತೆ ಇಲಾಖೆಯ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ದೇವರ ದಾಸಿಮಯ್ಯ ವಚನ ಸಾಹಿತ್ಯದ ಆದ್ಯ ಪ್ರವರ್ತಕ: ವಿ.ಎ. ಮುಳಗುಂದಮಠ
ವಚನಕಾರರಾದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಅವರು ವಚನಗಳನ್ನು ರಚಿಸುವ ಮೊದಲೇ ದೇವರ ದಾಸಿಮಯ್ಯ ವಚನಗಳನ್ನು ರಚಿಸಿ ಮೊದಲ ವಚನಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.