ಜಗದ ಕವಿ, ಯುಗದ ಕವಿ ರಾಷ್ಟ್ರಕವಿ ಕುವೆಂಪು

| Published : Jan 01 2025, 12:01 AM IST

ಸಾರಾಂಶ

ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡದ ಶ್ರೇಷ್ಠ ಕವಿ, ಜಗದ ಕವಿ, ಯುಗದ ಕವಿ ಕುವೆಂಪು ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮಿಗಳು ಹೇಳಿದರು.

ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಶ್ರೀ ಅಭಿಮತ

ಕನ್ನಡಪ್ರಭ ವಾರ್ತೆ ಯಾದಗಿರಿ

ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡದ ಶ್ರೇಷ್ಠ ಕವಿ, ಜಗದ ಕವಿ, ಯುಗದ ಕವಿ ಕುವೆಂಪು ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮಿಗಳು ಹೇಳಿದರು.ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀರಾಮಾಯಣ ದರ್ಶನಂ ಎಂಬ ಮಹಾಕಾವ್ಯವನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿ ಕನ್ನಡದ ಹಿರಿಮೆಯನ್ನು ವಿಶ್ವಕ್ಕೆ ಪರಿಚಯಿಸಿ ಗಮನ ಸೆಳೆದ ಸಮಾನತೆಯ ಕವಿ ಎಂದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಕುವೆಂಪು ಅವರು ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ಕುಲಪತಿಗಳಾಗಿ, ಕನ್ನಡದ ಶ್ರೇಷ್ಠ ಕವಿ, ಕಾದಂಬರಿಕಾರ, ಲೇಖಕ, ಬರಹಗಾರರಾಗಿ ಅವರು ಮಾಡಿದ ಸೇವೆ ಅಮೋಘ ಮತ್ತು ಅಪಾರ. ಕುವೆಂಪು ಅವರ ಕವಿ ಶೈಲಿ ಕನ್ನಡದ ಪ್ರಸಿದ್ಧ ಸಾಹಿತಿಕ ತಾಣವಾಗಿ ನಮ್ಮ ಮುಂದೆ ಇದೆ. ಕಾರಣ ಕುವೆಂಪು ಅವರ ಸಾಹಿತ್ಯ ಪ್ರೇಮ ಸರ್ವರಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷರಾದ ಪ್ರಕಾಶ ಅಂಗಡಿ ಕನ್ನೆಳ್ಳಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಡಾ. ಭೀಮರಾಯ ಲಿಂಗೇರಿ, ಡಾ. ಎಸ್.ಎಸ್. ನಾಯಕ, ಸಿ.ಎಂ. ಪಟ್ಟೇದಾರ, ಆರ್. ಮಹಾದೇವಪ್ಪಗೌಡ ಅಬ್ಬೆತುಮಕೂರ, ಸೋಮಶೇಖರ ಮಣ್ಣೂರ, ದೇವರಾಜ್ ವರ್ಕನಳ್ಳಿ, ದುರ್ಗಪ್ಪ ಪೂಜಾರಿ, ಸಿದ್ದಪ್ರಸಾದ ಪಾಟೀಲ್ ಸೇರಿದಂತೆ ಇತರರಿದ್ದರು.