ಸಾರಾಂಶ
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ ಮತ್ತು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಗಣಪತಿ ವಿಸರ್ಜನಾ ಮಹೋತ್ಸವವು ಆ. 31ರಂದು ಜರುಗಲಿದ್ದು, ಇದರ ಬಿತ್ತಿ ಪತ್ರವನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ ಮತ್ತು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಅವರು ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಮಾಜಿ ಸಂಸದ ಪ್ರತಾಪ ಸಿಂಹ, ಮಾಜಿ ಮೇಯರ್ ಶಿವಕುಮಾರ್, ಎಚ್.ಜಿ. ಗಿರಿಧರ್, ಎಸ್. ಮುರಳಿ, ಮಂಜುನಾಥ್, ಶ್ರೀನಿವಾಸ್, ಜಗದೀಶ್, ಮಣಿರತ್ನಂ, ಕಾರ್ತಿಕ್ , ಪ್ರದೀಶ ಮೊದಲಾದವರು ಇದ್ದರು.