ಪ್ರಜ್ವಲ್ ಪ್ರಕರಣ ಬೇರೆ ತನಿಖಾ ಸಂಸ್ಥೆಗಳಿಗೆ ವಹಿಸುವುದು ಬೇಡ

| Published : May 16 2024, 12:45 AM IST

ಸಾರಾಂಶ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರಕಾರ ಎಸ್.ಐ.ಟಿ.ಗೆ ವಹಿಸಿದ್ದು ಸಂತಸ ತಂದಿದೆ. ಎಸ್ಐಟಿ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದೆ. ಹೀಗಾಗಿ ಈ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗಳಿಗೆ ವಹಿಸುವುದು ಬೇಡ ಎಂದು ಕೆಪಿಸಿಸಿ ಮಹಿಳಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರಕಾರ ಎಸ್.ಐ.ಟಿ.ಗೆ ವಹಿಸಿದ್ದು ಸಂತಸ ತಂದಿದೆ. ಎಸ್‌ಐಟಿ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದೆ. ಹೀಗಾಗಿ ಈ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗಳಿಗೆ ವಹಿಸುವುದು ಬೇಡ ಎಂದು ಕೆಪಿಸಿಸಿ ಮಹಿಳಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿದ್ಯಾವತಿ ಅಂಕಲಗಿ, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರಕಾರವು ಎಸ್.ಐ.ಟಿ. ಗೆ ವಹಿಸಿದ್ದು ನಮಗೆ ತೃಪ್ತಿ ಇದೆ. ಕರ್ನಾಟಕದ ಎಸ್.ಐ.ಟಿ. ಬಗ್ಗೆ ಭರವಸೆ ಇದೆ. ಕರ್ನಾಟಕದ ಪೊಲೀಸರು ದಕ್ಷರಿದ್ದು, ಈಗಾಗಲೇ ಛಾಪಾ ಕಾಗದ ಪ್ರಕರಣದಲ್ಲಿ ಹಾಗೂ ತೀರಾ ಇತ್ತೀಚಿನ ರಾಮೇಶ್ವರ ಕೆಫೆ ಬ್ಲಾಸ್ಟ್ ಪ್ರಕರಣವನ್ನು ಭೇದಿಸಿದ ಪ್ರಕರಣದಲ್ಲಿ ಇದನ್ನು ಸಾಬೀತು ಮಾಡಿದ್ದಾರೆ ಎಂದು ಹೇಳಿದರು. ಅಲ್ಲದೆ ಸಂಸದ ಪ್ರಜ್ವಲ್ ರೇವಣ್ಣ ನವರನ್ನು ಎಲ್ಲಿದ್ದರೂ ಕರೆತಂದು ಬಂಧಿಸಲು ಕೇಂದ್ರ ಸರಕಾರದವರು ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಿಗೆ ಸೂಕ್ತ ರಕ್ಷಣೆಗಾಗಿ ವಿಶೇಷ ವ್ಯವಸ್ಥೆ ಹಾಗೂ ತುರ್ತಾಗಿ ಭರವಸೆಯ ಅವಶ್ಯಕತೆ ಇದೆ. ಸದರಿ ಪ್ರಕರಣವು ಒಂದು ಗಂಭೀರ ಸ್ವರೂಪದ್ದಾಗಿದ್ದು, ನಾಡಿನ ಜನತೆ ತಲೆತಗ್ಗಿಸುವಂತಹ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾದೇವಿ ಗೋಕಾಕ, ಭಾರತಿ ಹೊಸಮನಿ, ಮಂಜುಳಾ ಗಾಯಕವಾಡ, ಆಸ್ಮಾ ಕಾಲೇಬಾಗ, ಹಮೀದಾ ಪಟೇಲ, ಮುಸ್ಕಾನ ಶಿವಣಗಿ, ಅಂಬಿಕಾ ಪಾಟೀಲ, ಶರಣಮ್ಮ ನಾಯಕ, ಜ್ಯೋತಿ ಗುಡಿಮನಿ, ಲಲಿತಾ ನಾಯಕ, ಭಾಗೀರಥಿ ನಾಗರಹಳ್ಳಿ, ಕಾಶಿಬಾಯಿ ಹಡಪದ, ಗಂಗವ್ವ ಕಣಮುಚನಾಳ, ಸುಮಿತ್ರಾ ಹನೂರ, ಶಶಿಕಲಾ ಮಣೂರ, ಶಾರದಾ ಬೆಟಗೇರಿ, ಅಶ್ವಿನಿ ಪಾತ್ರೋಟಿ, ಶಮೀಮಾ ಅಕ್ಕಲಕೋಟ, ಸಂಜನಾ ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು.