ಸ್ವಚ್ಛತೆ ದೇಶದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಕೆ.ಆರ್.ನಂದಿನಿ

| Published : Sep 25 2025, 01:00 AM IST

ಸ್ವಚ್ಛತೆ ದೇಶದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಕೆ.ಆರ್.ನಂದಿನಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆ, ಗ್ರಾಮ ಮತ್ತು ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿರಿಸಲು ಅರಿವು ಮೂಡಿಸುವ ಸಲುವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನದ ಸೈಕಲ್ ಜಾಥಾವನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಕುರಿತಾದ ಪ್ರತಿಜ್ಞೆಯ ಸಾಲುಗಳನ್ನು ಪಾಲಿಸಿ.

ಕನ್ನಡಪ್ರಭ ವಾರ್ತೆ ಮಂಡ್ಯ

ನಮ್ಮ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕಾಪಾಡುವುದು ಸಾಮಾಜಿಕ ಹೊಣೆಗಾರಿಗೆ ಮಾತ್ರವಲ್ಲ. ಅದು ದೇಶದಲ್ಲಿನ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.

ನಗರದ ಜಿಪಂ ಕಚೇರಿಯಿಂದ ತಾಲೂಕಿನ ಕೊಮ್ಮೇರಹಳ್ಳಿ ಯೋಗನರಸಿಂಹಸ್ವಾಮಿ ಬೆಟ್ಟದವರೆಗೆ ಜಿಪಂನಿಂದ ಸ್ವಚ್ಛತಾ ಹಿ-ಸೇವಾ (ಸ್ವಚ್ಛೋತ್ಸವ) ಪಾಕ್ಷಿಕ- ಆಂದೋಲನದ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಹಸಿರು ನಿಶಾನೆ ತೋರಿ ಚಾಲನೆ ನೀಡಿದ ನಂತರ ಮಾತನಾಡಿದರು.

ಜಿಲ್ಲೆ, ಗ್ರಾಮ ಮತ್ತು ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿರಿಸಲು ಅರಿವು ಮೂಡಿಸುವ ಸಲುವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನದ ಸೈಕಲ್ ಜಾಥಾವನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಕುರಿತಾದ ಪ್ರತಿಜ್ಞೆಯ ಸಾಲುಗಳನ್ನು ಪಾಲಿಸುವಂತೆ ಸಲಹೆ ನೀಡಿದರು.

ಆರೋಗ್ಯಕರ ಜೀವನಕ್ಕೆ ಸ್ವಚ್ಛತೆ ಮುಖ್ಯ:

ಸೈಕಲ್ ಜಾಥಾ ಯೋಗನರಸಿಂಹಸ್ವಾಮಿ ಬೆಟ್ಟಕ್ಕೆ ಆಗಮಿಸಿದ ವೇಳೆ ಮಾತನಾಡಿದ ಶಾಸಕ ಪಿ.ರವಿಕುಮಾರ್, ಮನುಷ್ಯ ಜೀವನದಲ್ಲಿ ಉತ್ತಮ ಆರೋಗ್ಯದೊಂದಿಗೆ ಬದುಕಲು ಸ್ವಚ್ಛತೆ ಬಹಳ ಮುಖ್ಯ ಎಂದರು.

ಮನೆ ಸುತ್ತಮುತ್ತ ಕಸವನ್ನು ಹಾಕುವುದು ಮತ್ತು ಸರ್ಕಾರ ಕಸವನ್ನು ವಿಲೇವಾರಿ ಮಾಡುತ್ತಿಲ್ಲ ಎಂದು ಆಪಾದನೆ ಮಾಡುವುದು ಬೇಡ. ಪ್ರತಿಯೊಬ್ಬರೂ ಸರ್ಕಾರದಿಂದ ನಿಗದಿಪಡಿಸಿರುವ ಕಸ ವಿಲೇವಾರಿ ವಾಹನಗಳಿಗೆ ಪ್ರತಿನಿತ್ಯ ಕಸವನ್ನು ನೀಡಿ ಸುತ್ತಮುತ್ತಲಿನ ವಾತಾವರಣದ ಶುಚಿತ್ವವನ್ನು ಕಾಪಾಡಿ ಎಂದು ಸಾರ್ವಜನಿಕರಿಗೆ ತಿಳಿ ಹೇಳಿದರು.

ಸರ್ಕಾರದಿಂದ ಕಾಲ ಕಾಲಕ್ಕೆ ಸ್ವಚ್ಛತೆ ಕುರಿತು ಆಂದೋಲನ, ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಮಹತ್ವವನ್ನು ತಿಳಿದುಕೊಂಡು ತಮ್ಮ ಸುತ್ತಮುತ್ತಲಿನ ಜನರಲ್ಲೂ ಸ್ವಚ್ಛತೆಯ ಅರಿವು ಮೂಡಿಸಿ ಎಂದು ಮನವಿ ಮಾಡಿದರು.

ಈ ವೇಳೆ ಜಿಪಂ ಉಪಕಾರ್ಯದರ್ಶಿ ಲಕ್ಷ್ಮಿ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸೈಕಲ್ ಜಾಥಾದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪರಿಸರ ಸಂಸ್ಥೆಯ ಮಂಗಲ ಎಂ.ಯೋಗೀಶ್ ಸೇರಿದಂತೆ ಸಂಘ ಸಂಸ್ಥೆಗಳ ಮುಖ್ಯಸ್ಥರು, ಸುಮಾರು 150ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.