ಅರಣ್ಯವಾಸಿಗಳ ಸಮಸ್ಯೆ ಮುಖ್ಯಮಂತ್ರಿ ಗಮನಕ್ಕೆ

| Published : Oct 09 2025, 02:01 AM IST

ಅರಣ್ಯವಾಸಿಗಳ ಸಮಸ್ಯೆ ಮುಖ್ಯಮಂತ್ರಿ ಗಮನಕ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಗಮನ್ಕಕೆ ತರಲಾಯಿತು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಶಿರಸಿ:

ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಗಮನ್ಕಕೆ ತರಲಾಯಿತು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾರ್ಗದರ್ಶನದಲ್ಲಿ ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಮನವಿ ಮೂಲಕ ಅವರ ಗಮನಕ್ಕೆ ತಂದರು.

ಅರಣ್ಯವಾಸಿಗಳ ಭೂಮಿ ಹಕ್ಕಿನ ಸಮಸ್ಯೆಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ಸರ್ಕಾರ ಸಕ್ರಿಯೆವಾಗಿದೆ. ಶೀಘ್ರದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಪರಿಹರಿಸುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ನಿಯೋಗದಲ್ಲಿ ವಿವಿಧ ಜಿಲ್ಲೆಯ ಪ್ರಮುಖರಾದ ಬೋರಯ್ಯ, ರಾಮು, ಶಿವಣ್ಣ ಚಿತ್ರದುರ್ಗ, ಶಂಕರ ಕೊಪ್ಪ, ಶಿವಾನಂದ ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಅರಣ್ಯವಾಸಿಗಳ ಪರ ಸರ್ಕಾರ ನಿರ್ಧಾರ:

ಪುನರ್ ಪರೀಶೀಲನಾ ಪ್ರಕ್ರಿಯೆ ಜರುಗಿಸದೇ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ತಿರಸ್ಕರಿಸಿದ ವರದಿ ಕೇಂದ್ರ ಸರ್ಕಾರಕ್ಕೆ ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ಕುರಿತು ರಾಜ್ಯದ ಸಚಿವರಾದ ಎಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ ಅರಣ್ಯವಾಸಿಗಳ ಪರ ಸರ್ಕಾರದ ನಿರ್ಧಾರ ಇರುತ್ತದೆ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಅರಣ್ಯವಾಸಿಗಳಿಗೆ ಆತಂಕವಾಗದೆಂದು ಬೆಂಗಳೂರಿನಲ್ಲಿ ಭೇಟಿ ಆದ ಸಂದರ್ಭ ಭರವಸೆ ನೀಡಿದ್ದಾರೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅರಣ್ಯವಾಸಿಗಳ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಪ್ರೀಂಕೋರ್ಟ್‌ನಲ್ಲಿ ನಿರ್ದೇಶನ ಮತ್ತು ಕೇಂದ್ರ ಸರ್ಕಾರದ ಮಾರ್ಗದರ್ಶನಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿನ ಅರಣ್ಯವಾಸಿಗಳ ಅರ್ಜಿ ತಿರಸ್ಕರಿಸಲ್ಪಟ್ಟಿದೆ ಎಂಬ ವಿಷಯ ಸಚಿವರ ಗಮನಕ್ಕೆ ತರಲಾಯಿತು. ಇತ್ತೀಚಿನ ಅರಣ್ಯ ಹಕ್ಕು ಕಾಯ್ದೆಯಲ್ಲಿನ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಚಾರಣೆ ಕುರಿತು ಸರ್ಕಾರ ಗಂಭೀರವಾಗಿ ಚಿಂತಿಸಿದೆ. ಇತ್ತೀಚಿನ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸರ್ಕಾರವು ಸ್ಪಷ್ಟತೆ ಹೊಂದಿದ್ದು, ಅರಣ್ಯವಾಸಿಗಳ ಪರ ಸುಪ್ರೀಂಕೋರ್ಟ್‌ನಲ್ಲಿ ಸರ್ಕಾರ ನಿಲುವು ಪ್ರಕಟಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.