ಮಳವಳ್ಳಿ ಕ್ಷೇತ್ರದ ಸಮಸ್ಯೆ ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

| Published : Jun 08 2025, 11:55 PM IST

ಮಳವಳ್ಳಿ ಕ್ಷೇತ್ರದ ಸಮಸ್ಯೆ ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಪಶು ಇಲಾಖೆ, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳ ಸುಮಾರು 14 ಕೋಟಿಗೂ ಅಧಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯ ರಸ್ತೆಯಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಗ್ರಾಮದ ಎಲ್ಲಾ ರಸ್ತೆಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಕಳೆದ ಅವಧಿಯಲ್ಲಿದ್ದವರ ನಿರ್ಲಕ್ಷ್ಯದಿಂದ ಎದುರಾಗಿದ್ದ ಕ್ಷೇತ್ರದ ಮೂಲ ಸೌಲಭ್ಯದ ಸಮಸ್ಯೆಯನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ತಾಲೂಕಿನ ತಳಗವಾದಿ ಗ್ರಾಮದಲ್ಲಿ 6 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿ, ತಾಲೂಕಿನ ಗ್ರಾಮೀಣ ರಸ್ತೆ ಮತ್ತು ಜನರ ಮೂಲ ಸೌಕರ್ಯಕ್ಕೆ ಒತ್ತು ನೀಡದ ಕಾರಣ ನೀರಾವರಿ, ರಸ್ತೆ, ಮನೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಮಸ್ಯೆ ಎದುರಿಸುವಂತಾಗಿತ್ತು. ಸಮಸ್ಯೆ ಬಗೆಹರಿಸುವ ವಿಚಾರದಲ್ಲಿ ಅನುದಾನದ ಜೊತೆಗೆ ಯೋಜನೆ ತಂದು ತ್ವರಿತವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಸರ್ಕಾರಿ ಕಟ್ಟಡಗಳ ನಿರ್ಮಾಣ, ನಾಲೆಗಳು ಅಭಿವೃದ್ಧಿ, ಮುಖ್ಯ ರಸ್ತೆ ಸೇರಿದಂತೆ ಹಲವು ಯೋಜನೆಗಳ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಸದ್ಯದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಪಶು ಇಲಾಖೆ, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳ ಸುಮಾರು 14 ಕೋಟಿಗೂ ಅಧಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯ ರಸ್ತೆಯಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಗ್ರಾಮದ ಎಲ್ಲಾ ರಸ್ತೆಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.

ತಾಲೂಕಿನ ಹಂಗ್ರಾಪುರ, ರಾಗಿ ಬೊಮ್ಮನಹಳ್ಳಿ, ಮಾಗನೂರು, ತಳಗವಾದಿ, ಹುಲ್ಲೇಗಾಲ, ಮುದ್ದೇಗೌಡನದೊಡ್ಡಿ, ಚಿಕ್ಕ ಮೂಲಗೂಡು, ರಾಮಂದೂರು, ದೋರನಹಳ್ಳಿ, ಮಿಕ್ಕೇರಿ, ಕಿರುಗಾವಲು, ದೇಶಹಳ್ಳಿ, ಬೆಂಡರವಾಡಿ, ಕಲ್ಕುಣಿ, ನೇಣನೂರು ಸೇರಿದಂತೆ ಇತರೆ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸಿದರು.

ಇದೇ ವೇಳೆ ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಕೃಷ್ಣೇಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ ರಾಜು, ಜಿಪಂ ಮಾಜಿ ಸದಸ್ಯೆ ಸುಜಾತ ಕೆ.ಎಂ ಪುಟ್ಟು, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ ಚೌಡಯ್ಯ, ನಿರ್ದೇಶಕರಾದ ಕೆ.ಜೆ. ದೇವರಾಜು, ಪ್ರಕಾಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನರೇಂದ್ರ, ಸುಮಿತ್ರ, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಲಿಂಗೇಶ್ ಬೆವಿನಹಟ್ಟಿ, ಕಿರುಗಾವಲು ಗ್ರಾಪಂ ಉಪಾಧ್ಯಕ್ಷ ಮಹದೇವು, ಮುಖಂಡರಾದ ವಿಶ್ವ,ಪ್ರಭುಸ್ವಾಮಿ, ಬಾಲು ಸೇರಿದಂತೆ ಇತರರು ಇದ್ದರು.