ಸಾರಾಂಶ
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ ಭಾನುವಾರ ಹಂಚು ಕಾರ್ಮಿಕರ ಭವನದಲ್ಲಿ ಜಿ.ಡಿ. ಪಂಜು ಅಧ್ಯಕ್ಷತೆಯಲ್ಲಿ ನಡೆಯಿತು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಕಾಮ್ರೇಡ್ ಪುಟ್ಟುಮಾದು ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ ಭಾನುವಾರ ಹಂಚು ಕಾರ್ಮಿಕರ ಭವನದಲ್ಲಿ ಜಿ.ಡಿ. ಪಂಜು ಅಧ್ಯಕ್ಷತೆಯಲ್ಲಿ ನಡೆಯಿತು.ಸಮ್ಮೇಳನ ಉದ್ಘಾಟಿಸಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಕಾಮ್ರೇಡ್ ಪುಟ್ಟುಮಾದು ಮಾತಾನಾಡಿ, ಪಕ್ಕದ ರಾಜ್ಯ ಕೇರಳದಲ್ಲಿ ಕೃಷಿ ಕೂಲಿಕಾರರಿಗೆ 60 ವರ್ಷದ ನಂತರ 3000 ಪಿಂಚಣಿ, ಮನೆ ಕಟ್ಟಲು 5 ಸೆಂಟ್ಸ್ ಜಾಗ ಹಾಗೂ ಕಲ್ಯಾಣ ಮಂಡಳಿ ಸವಲತ್ತುಗಳು ಸಿಗುತ್ತವೆ. ಆದರೆ ಕರ್ನಾಟಕದಲ್ಲಿ ಯಾವುದೂ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಪ್ರತಿವರ್ಷ ಬಜೆಟ್ ಅನುದಾನ ಕಡಿತಗೊಳಿಸಿಕೊಂಡು ಬರುತ್ತಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ನೌಕರರಿಗೆ ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು. 600 ರು. ವೇತನ ಹಾಗೂ 200 ದಿನ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕವಿರಾಜ್ ಎಸ್. ಕಾಂಚನ್, ಬೈಂದೂರು ತಾಲೂಕು ಅಧ್ಯಕ್ಷ ಪದ್ಮಾವತಿ ಶಿರೂರು, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಉಪಸ್ಥಿತರಿದ್ದರು.ಸಂಘದ ಹಿರಿಯ ಸದಸ್ಯರಾದ ಕಮಲಾ ಬಸ್ರೂರು ಧ್ವಜಾರೋಹಣ ನೆರವೇರಿಸಿದರು. ಹುತಾತ್ಮ ಸಂಗಾತಿಗಳಿಗೆ ಶ್ರದ್ಧಾಂಜಲಿಯನ್ನು ಶೋಭಾ ಮಂಡಿಸಿದರು. ನಾಗರತ್ನ ರಾಮನಗರ ನಿರೂಪಿಸಿದರು. ನಾಗರತ್ನ ನಾಡ ಸ್ವಾಗತಿಸಿ, ವಂದಿಸಿದರು. ಮುಂದಿನ 3 ವರ್ಷಗಳಿಗೆ 24 ಜನರ ಹೊಸ ಸಮಿತಿ ಆಯ್ಕೆ ಮಾಡಲಾಯಿತು.