ಮೆರವಣಿಗೆಗೆ ಜಿಪಂ ಸಿಇಒ ಚಾಲನೆ

| Published : Aug 21 2025, 01:00 AM IST

ಸಾರಾಂಶ

ದೇವರಾಜ್ ಅರಸು ಮಾಜಿ ಮುಖ್ಯಮಂತ್ರಿಗಳಾಗಿ ಅಪರ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಜನನಾಯಕರಾಗಿ ಕೆಲಸ ಮಾಡಿದ್ದಾರೆ ಎಂದರು. ಅವರು ಜಾರಿಗೆ ತಂದ ಪ್ರಮುಖ ಯೋಜನೆಗಳ ಪೈಕಿ ಉಳುವವನೇ ಭೂಮಿಯ ಒಡೆಯ ಎಂಬ ಯೋಜನೆ ಲಕ್ಷಾಂತರ ಭೂ ರಹಿತ ರೈತರು ಭೂಮಿ ಹೊಂದುವಂತೆ ಆಯಿತು. ಇದರಿಂದ ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದ ರೈತರು ತಾವು ಉಳುಮೆ ಮಾಡುತ್ತಿದ್ದ ಭೂಮಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶ ಸಿಕ್ಕಿತ್ತು. ಇಂತಹ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಬಣ್ಣಿಸಿದರು.

ಹಾಸನ: ಸಾಮಾಜಿಕ ಕ್ರಾಂತಿಯ ನೇತಾರ ಪರಿವರ್ತನೆಯ ಹರಿಕಾರ ಹಾಗೂ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ೧೧೦ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಆಕರ್ಷಕ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಚಾಲನೆ ನೀಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿ, ದೇವರಾಜ್ ಅರಸು ಮಾಜಿ ಮುಖ್ಯಮಂತ್ರಿಗಳಾಗಿ ಅಪರ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಜನನಾಯಕರಾಗಿ ಕೆಲಸ ಮಾಡಿದ್ದಾರೆ ಎಂದರು. ಅವರು ಜಾರಿಗೆ ತಂದ ಪ್ರಮುಖ ಯೋಜನೆಗಳ ಪೈಕಿ ಉಳುವವನೇ ಭೂಮಿಯ ಒಡೆಯ ಎಂಬ ಯೋಜನೆ ಲಕ್ಷಾಂತರ ಭೂ ರಹಿತ ರೈತರು ಭೂಮಿ ಹೊಂದುವಂತೆ ಆಯಿತು. ಇದರಿಂದ ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದ ರೈತರು ತಾವು ಉಳುಮೆ ಮಾಡುತ್ತಿದ್ದ ಭೂಮಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶ ಸಿಕ್ಕಿತ್ತು. ಇಂತಹ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಬಣ್ಣಿಸಿದರು. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ನಡೆಯಬೇಕು ಎಂದು ಕರೆ ನೀಡಿದರು.

ಬೆಳ್ಳಿರಥದಲ್ಲಿ ಇರಿಸಲಾಗಿದ್ದ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಅವರು ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ. ಕುಮಾರ್, ಸಮಾಜದ ಪುಟ್ಟಸ್ವಾಮಿಗೌಡ, ಪ್ರೇಮಮ್ಮ, ಕಲಾವಿದ ಬಿ.ಟಿ. ಮಾನವ ಇತರರು ಉಪಸ್ಥಿತರಿದ್ದರು.