ಸಾರಾಂಶ
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ತಾಲೂಕಿನ ಹಿರಿಯ ಅಧಿಕಾರಿ, ತಾಪಂ ಇಒ ಟಿ.ಆರ್.ಮಲ್ಲಾಡದ ಅವರನ್ನು ಬಿಟ್ಟು ಕಾರ್ಯಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಹುಕ್ಕೇರಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರಿ ಕಾರ್ಯಕ್ರಮದಲ್ಲಿಯೇ ಎಡವಟ್ಟು ಮಾಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಯೋಜನೆಯ ಮೇಲುಸ್ತುವಾರಿ ನೋಡಿಕೊಳ್ಳುವ ಅಧಿಕಾರಿಯನ್ನೇ ಮರೆತಿರುವುದು ಇದೀಗ ಈ ಪ್ರಶ್ನೆಗೆ ಕಾರಣವಾಗಿದೆ.ಶಿಕ್ಷಣ ಇಲಾಖೆ ಸ್ಥಳೀಯ ಅಧಿಕಾರಿಗಳ ಈ ಪ್ರಮಾದಕ್ಕೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಕೋಟೆ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಮತ್ತು ಪಟ್ಟಣದ ಹೊರ ವಲಯದ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನದ ಆವರಣದಲ್ಲಿ ನಡೆದ ಅಕ್ಷರ ದಾಸೋಹ ಯೋಜನೆ ಚಾಲನೆ ವೇಳೆ ಹಿರಿಯ ಅಧಿಕಾರಿಗಳನ್ನು ನಿರ್ಲಕ್ಷಿಸಲಾಗಿದೆ ಎಂಬುವುದೇ ಈಗ ಬಂದಿರುವ ಆರೋಪ.
ಶಿಕ್ಷಣ ಇಲಾಖೆ ಮತ್ತು ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ಈ ಇಬ್ಬಗೆಯ ನಡೆಯನ್ನು ತೀವ್ರವಾಗಿ ಖಂಡಿಸಿರುವ ದಲಿತ ಸಂಘಟನೆಗಳು ಇದೀಗ ಅವರ ವಿರುದ್ಧ ಹೋರಾಟ ನಡೆಸಲು ಮುಂದಾಗಿವೆ.----------ಕೋಟ್ ---
ಹುಕ್ಕೇರಿಯಲ್ಲಿ ಸರ್ಕಾರದ ಅನುದಾನದಿಂದ ನಡೆಯಲ್ಪಡುವ ಬಿಸಿಯೂಟ ವಿತರಣೆಯ ಚಾಲನೆ ಮತ್ತು ಶಾಲಾ ಪ್ರಾರಂಭೋತ್ಸವಕ್ಕೆ ನನ್ನನ್ನು ಕರೆದಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ವಿವರಣೆ ಪಡೆದು ಕ್ರಮ ವಹಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು.- ಟಿ.ಆರ್.ಮಲ್ಲಾಡದ, ಇಒ ತಾಪಂ