ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸಲ್ಲ

| Published : Apr 23 2024, 12:46 AM IST

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಜಂಗಮ ಸಮಾಜ, ಕರ್ನಾಟಕ ರಕ್ಷಣೆ ವೇದಿಕೆ ಹಾಗೂ ವಿವಿಧ ಸಂಘಟನೆಗಳು ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದವು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಜಂಗಮ ಸಮಾಜ, ಕರ್ನಾಟಕ ರಕ್ಷಣೆ ವೇದಿಕೆ ಹಾಗೂ ವಿವಿಧ ಸಂಘಟನೆಗಳು ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದವು.ಪ್ರತಿಭಟನೆ ವೇಳೆ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಮುತ್ತಗಿಯ ವೀರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೇಹಾ ಹಿರೇಮಠ ಹತ್ಯೆ ಅಮಾನವೀಯ ಕೃತ್ಯವಾಗಿದೆ. ಮಹಿಳೆಯನ್ನು ಪೂಜ್ಯ ಭಾವನೆಯಿಂದ ಕಾಣುವ ದೇಶದಲ್ಲಿ ಇಂತಹ ಕೃತ್ಯಗಳು ನಡೆದಿರುವುದು ಖಂಡನೀಯ. ಈ ಘಟನೆಯನ್ನು ವೈಯಕ್ತಿಕ ವಿಚಾರ ಎಂದು ಹೇಳುವುದು ಸರಿಯಲ್ಲ. ಇಂತಹ ಘಟನೆ ಬೇರೆ ರಾಜ್ಯದಲ್ಲಿ ನಡೆದಿದ್ದರೆ ಬುಲ್ಡೋಜರ್‌ ತೆಗೆದುಕೊಂಡು ಹೋಗಿ ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು. ಜವಾಬ್ದಾರಿ ಹೊಂದಿದ ವ್ಯಕ್ತಿಗಳು ಇಂತಹ ಘಟನೆಗಳ ಬಗ್ಗೆ ನಿರ್ಲಕ್ಷ್ಯ ತೋರಬಾರದು. ನೇಹಾ ಹತ್ಯೆಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊಲೆ ಮಾಡಿದ ವ್ಯಕ್ತಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಹೂವಿನಹಿಪ್ಪರಗಿಯ ದ್ರಾಕ್ಷಾಯಿಣಿ ಅಮ್ಮ, ಚಬನೂರಿನ ರಾಮಲಿಂಗಯ್ಯ, ಮಸಬಿನಾಳದ ಸಿದ್ಧರಾಮ ಸ್ವಾಮೀಜಿ, ಹುಣಶ್ಯಾಳ ಪಿ.ಬಿಯ ಆನಂದ ದೇವರು ಮತ್ತು ವಿವಿಧ ಸಂಘಟನೆಗಳ ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಅಶೋಕ ಹಾರಿವಾಳ, ಶಿವರುದ್ರಯ್ಯ ಹಿರೇಮಠ, ಸಿದ್ದಣ್ಣ ಕಲ್ಲೂರ, ರವಿಗೌಡ ಚಿಕ್ಕೊಂಡ, ಪ್ರಭಾಕರ ಖೇಡದ, ಜಗದೀಶ ಕೊಟ್ರಶೆಟ್ಟಿ, ಸಿ.ಎನ್.ಹಿರೇಮಠ, ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿದರು.

ಸ್ಥಳಕ್ಕೆ ಆಗಮಿಸಿದ ಶಿರಸ್ತೇದಾರ್‌ ಮಹೇಶ ಬಳಗಾನೂರ ಅವರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಜಂಗಮ ಸಮಾಜದ ತಾಲೂಕಾಧ್ಯಕ್ಷ ರುದ್ರಮುನಿ ಸಾರಂಗಮಠ, ನೀಲಪ್ಪ ನಾಯಕ, ಶಿವಲಿಂಗಯ್ಯ ತೆಗ್ಗಿನಮಠ, ಸಿದ್ದಣ್ಣ ಕಲ್ಲೂರ, ಪಿ.ಎಲ್.ಹಿರೇಮಠ, ಅಮರಯ್ಯ ಹಿರೇಮಠ, ಬಸವರಾಜ ಗೊಳಸಂಗಿ, ರಾಜಶೇಖರ ಗುತ್ತರಗಿಮಠ, ರಾಚಯ್ಯ ಗಣಕುಮಾರಮಠ, ಎಸ್.ಎ.ದೇಗಿನಾಳ, ಲೋಕೇಶ ಚಿಕ್ಕಮಠ, ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಗಣಾಚಾರಿ, ಕಾಶೀನಾಥ ಅವಟಿ, ಮಣಿಕಂಠ ಕಲ್ಲೂರ, ಶಿವಶಂಕ್ರಯ್ಯ ಹಿರೇಮಠ, ಶ್ರೀಕಾಂತ ಮಠಪತಿ, ಪಂಪಯ್ಯ ಹಿರೇಮಠ ಇತರರು ಭಾಗವಹಿಸಿದ್ದರು.