ಸಾರ್ವಜನಿಕರು ಕಾಮಗಾರಿ ಗುಣಮಟ್ಟದೆಡೆ ನಿಗಾ ವಹಿಸಿ

| Published : Nov 13 2025, 12:05 AM IST

ಸಾರ್ವಜನಿಕರು ಕಾಮಗಾರಿ ಗುಣಮಟ್ಟದೆಡೆ ನಿಗಾ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು ಮುಂದೆಯೂ ಇನ್ನೂಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು ಮುಂದೆಯೂ ಇನ್ನೂಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಸೋಂಪುರ ಹೋಬಳಿಯ ಕಸಬಾ ನಿಜಗಲ್ ಗ್ರಾಮದಲ್ಲಿ 35 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳು ಪ್ರಗತಿಯಾಗುತ್ತವೆ. ಹಾಗಾಗಿ ತಾಲೂಕಿನ ಮುಖ್ಯರಸ್ತೆಗಳು ಸೇರಿದಂತೆ ಗ್ರಾಮೀಣ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಗಮನ ನೀಡಲಾಗಿದೆ. ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಮತ್ತು ಗುತ್ತಿಗೆದಾರರು ಗುಣಮಟ್ಟ ಪಾಲನೆಗೆ ಗಮನ ನೀಡಬೇಕು. ಜನರು ಕೂಡ ಕಾಮಗಾರಿ ನಿಗಾವಹಿಸಬೇಕು. ಲೋಪ ಕಂಡುಬರಬಾರದು. ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.

ಮುಖಂಡ ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ತಾಲೂಕಿನಲ್ಲಿ ಹಿಂದೆಂದು ಕಾಣದ ರೀತಿಯಲ್ಲಿ ಉತ್ತಮವಾಗಿ ರಸ್ತೆಗಳನ್ನು ನಮ್ಮ ಶಾಸಕರು ಅನುದಾನ ತಂದು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುತ್ತಿದ್ದಾರೆ. ಸೋಂಪುರ ಹೋಬಳಿಯ ಅಭಿವೃದ್ದಿಗೆ ಹೆಚ್ಚಿನ ನೀಡುತ್ತಿರುವುದು ಕಾರ್ಯಕರ್ತರಲ್ಲಿ ಖುಷಿ ತಂದಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ರವಿ, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಎನ್‌ಪಿಎ ಸದಸ್ಯ ಅಂಚೆಮನೆ ಪ್ರಕಾಶ್, ಗ್ರಾಪಂ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ವನಿತಾ, ಗ್ರಾಪಂ ಸದಸ್ಯರಾದ ಶಿವಕುಮಾರ್, ಮುಖಂಡರಾದ ಕಸಬಾ ನಿಜಗಲ್ ಸಿದ್ದರಾಜು, ಪಾರ್ಥಣ್ಣ, ಯೋಗಾನಂದೀಶ್, ಸಿದ್ದರಾಜು, ನಾರಾಯಣಸ್ವಾಮಿ, ವೆಂಕಟಾಚಲಯ್ಯ, ದಿನೇಶ್ ನಾಯಕ್, ಮನು ಪ್ರಸಾದ್, ಮಂಜುನಾಥ್, ಚಿಕ್ಕಣ್ಣ, ನಾಗರಾಜು, ಚಂದ್ರಶೇಖರ್, ಪ್ರವೀಣ್ ಇತರರಿದ್ದರು.

ಪೋಟೋ 4 :

ಸೋಂಪುರ ಹೋಬಳಿಯ ಕಸಬಾ ನಿಜಗಲ್ ಗ್ರಾಮದಲ್ಲಿ 35 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್, ಎಂಎಲ್ ಸಿ ರವಿ ಹಾಗೂ ಮುಖಂಡರು ಚಾಲನೆ ನೀಡಿದರು.