ಕನ್ನಡಪ್ರಭ ವಾರ್ತೆ, ಬೆಂಗಳೂರು
ರಾಜ್ಯಾದ್ಯಂತ ಜೂ.28 ರಂದು ಭಾನುವಾರ ರಾಷ್ಟ್ರೀಯ ಲಸಿಕಾ ದಿನಾಚರಣೆ ಪ್ರಯುಕ್ತ ಪೋಲಿಯೊ ಲಸಿಕೆ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 64.84 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಜೂ.28 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಜೂ.28 ರಂದು ಲಸಿಕೆ ತಪ್ಪಿಸಿಕೊಂಡ ಮಕ್ಕಳಿಗಾಗಿ ಎರಡು ದಿನ ವಿಶೇಷ ವ್ಯವಸ್ಥೆ ಮಾಡಲಿದ್ದು, ಆ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗುವುದು ಎಂದರು.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರ, ಪೋಲಿಯೊಹನಿ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ 36,076 ಬೂತ್ ಸಿದ್ಧಪಡಿಸುತ್ತಿದ್ದು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು 988 ಸಂಚಾರಿ ತಂಡ ರಚಿಸಲಾಗಿದೆ.2125 ಟ್ರಾನ್ಸಿಟ್ ತಂಡವು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. ಈ ಕಾರ್ಯಕ್ರಮಕ್ಕೆ 1.14 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು ಎಂಬುದು ನಮ್ಮ ಗುರಿ ಎಂದು ಹೇಳಿದರು.
ವದಂತಿಗಳಿಗೆ ಕಿವಿಗೊಡಬೇಡಿ:
ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸಬಹುದು. ಹೀಗಾಗಿ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಯು.ಟಿ. ಖಾದರ್ ಮನವಿ ಮಾಡಿದರು.ಲಸಿಕಾ ಕೇಂದ್ರ ಪತ್ತೆಗೆ ಆ್ಯಪ್:
ಹತ್ತಿರದ ಲಸಿಕಾ ಕೇಂದ್ರ ಪತ್ತೆಗೆ ‘nearby vaccination centers’ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಈ ಆ್ಯಪ್‌ನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ ಇನ್‌ಸ್ಟಾಲ್ ಮಾಡಿಕೊಂಡು ಸಮೀಪದ ಕೇಂದ್ರ ಹುಡುಕಬಹುದು. ಈ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿದರೆ, ಆ್ಯಪ್ ಡ್ಲೌನ್‌ಲೋಡ್ ಮಾಡಿಕೊಳ್ಳಬಹುದು. ---------ಬಾಕ್ಸ್ಒಟ್ಟು ಮಕ್ಕಳು- 64,84,901ಲಸಿಕಾ ಕಾರ್ಯಕರ್ತರು - 1,14,213
ಮೇಲ್ವಿಚಾರಕರು- 7,197